ICC T20 Rankings: ಮುಂಬಡ್ತಿ ಪಡೆದ ಅಕ್ಷರ್ ಪಟೇಲ್, ರವಿ ಬಿಷ್ಣೋಯ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಸಿಸಿ ಬಿಡುಗಡೆ ಟಿ20 ಶ್ರೇಯಾಂಕ ಬಿಡುಗಡೆ ಮಾಡಿದ್ದು , ಬೌಲಿಂಗ್ ನಲ್ಲಿ ಟೀಂ ಇಂಡಿಯಾದ ಇಬ್ಬರು ಸ್ಪಿನ್ ಬೌಲರ್‌ಗಳಾದ ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ಭರ್ಜರಿ ಮುಂಬಡ್ತಿ ಪಡೆದಿದ್ದು, ಐದರೊಳಗೆ ಸ್ಥಾನ ಪಡೆದಿದ್ದಾರೆ.

ಈ ಹಿಂದೆ ಐದನೇ ಸ್ಥಾನದಲ್ಲಿದ್ದ ಅಕ್ಷರ್ ಪಟೇಲ್ ಈಗ 660 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ. ರವಿ ಬಿಷ್ಣೋಯ್ 659 ರೇಟಿಂಗ್ ಅಂಕಗಳೊಂದಿಗೆ ಜಂಟಿಯಾಗಿ ಆರನೇ ಸ್ಥಾನದಲ್ಲಿದ್ದಾರೆ.

ಉಳಿದಂತೆ ಇಂಗ್ಲೆಂಡ್‌ನ ಲೆಗ್ ಸ್ಪಿನ್ನರ್ ಆದಿಲ್ ರಶೀದ್ 726 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಇತ್ತೀಚೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ಶ್ರೀಲಂಕಾದ ಟಿ20 ನಾಯಕ ವನಿಂದು ಹಸರಂಗಾ 687 ರೇಟಿಂಗ್​ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ವೆಸ್ಟ್ ಇಂಡೀಸ್ ಸ್ಪಿನ್ನರ್ ಅಕಿಲ್ ಹುಸೇನ್ ಕೂಡ ಇತ್ತೀಚಿನ ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ ಒಂದು ಸ್ಥಾನ ಜಿಗಿದಿದ್ದು, 664 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!