Friday, September 30, 2022

Latest Posts

ಐಸಿಸಿ ಟಿ20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಕಟವಾಗಿದ್ದ, ಬಾಬರ್ ಅಜಂ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಆಲ್ರೌಂಡರ್ ಶಾದಬ್ ಖಾನ್‌, ಉಪನಾಯಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಎದುರು ಸೋಲು ಅನುಭವಿಸಿದ ಬೆನ್ನಲ್ಲೇ ಹಲವು ಕ್ರಿಕೆಟಿಗರು, ಶೋಯೆಬ್ ಮಲಿಕ್‌ಗೆ ಅವಕಾಶ ನೀಡಬೇಕು ಎನ್ನುವ ಆಗ್ರಹ ಕೇಳಿಬಂದಿತ್ತು. ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಈ ವಾದಕ್ಕೆ ಸೊಪ್ಪು ಹಾಕಿಲ್ಲ.

ಇನ್ನು ಫಿಟ್ನೆಸ್ ಸಮಸ್ಯೆಯಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿದಿದ್ದ ಪಾಕಿಸ್ತಾನ ತಂಡದ ವೇಗಿ ಶಾಹಿನ್ ಅಫ್ರಿದಿ, ಟಿ20 ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದಂತೆ ನಸೀಮ್ ಶಾ, ಹ್ಯಾರಿಸ್ ರೌಫ್, ಮೊಹಮ್ಮದ್ ಹೊಸನೈನ್‌, ವೇಗದ ಬೌಲರ್‌ಗಳ ರೂಪದಲ್ಲಿ ಪಾಕಿಸ್ತಾನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಏಷ್ಯಾಕಪ್ ಟೂರ್ನಿಯಲ್ಲಿ ನೀರಸ ಪ್ರದರ್ಶನ ತೋರಿದ್ದ ಫಖರ್ ಜಮಾನ್, 15 ಆಟಗಾರರ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ತಂಡ ಹೀಗಿದೆ ನೋಡಿ

ಬಾಬರ್ ಅಜಂ(ನಾಯಕ), ಶಾದಾಬ್ ಖಾನ್(ಉಪನಾಯಕ), ಆಸಿಫ್ ಅಲಿ, ಹೈದರ್ ಅಲಿ, ಹ್ಯಾರಿಸ್ ರೌಫ್, ಇಫ್ತಿಕರ್ ಅಹಮ್ಮದ್, ಖುಷ್‌ದಿಲ್ ಶಾ, ಮೊಹಮ್ಮದ್ ಹೊಸನೈನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸೀಂ, ನಸೀಂ ಶಾ, ಶಾಹೀನ್ ಶಾ ಅಫ್ರಿದಿ, ಶಾನ್ ಮಸೂದ್, ಉಸ್ಮಾನ್ ಖಾದೀರ್.

ಮೀಸಲು ಆಟಗಾರರು: ಫಖರ್ ಜಮಾನ್, ಮೊಹಮ್ಮದ್ ಹ್ಯಾರಿಸ್, ಶೆಹನವಾಜ್ ದಹಾನಿ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!