ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ಟೋಬರ್ 16ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರನ್ನೊಳಗೊಂಡ ಬಲಿಷ್ಠ ಬಾಂಗ್ಲಾದೇಶ ಕ್ರಿಕೆಟ್ ತಂಡ ಪ್ರಕಟವಾಗಿದೆ.
ಬಾಂಗ್ಲಾದೇಶ ಕ್ರಿಕೆಟ್ ತಂಡವನ್ನು ಶಕೀಬ್ ಅಲ್ ಹಸನ್ ನಾಯಕನಾಗಿ ಮುನ್ನಡೆಸಲಿದ್ದಾರೆ. ಇನ್ನು ಅಚ್ಚರಿಯ ಬೆಳವಣಿಗೆ ಎನ್ನುವಂತೆ ಮೊಹಮದುಲ್ಲಾ ರಿಯಾದ್, ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಬಾಂಗ್ಲಾದೇಶ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.
ಬರೋಬ್ಬರಿ 3 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿ, ಏಷ್ಯಾಕಪ್ ಟೂರ್ನಿಯಲ್ಲಿ ಏಕೈಕ ಪಂದ್ಯವನ್ನಾಡಿದ ಶಬ್ಬೀರ್ ರೆಹಮಾನ್, ಟಿ20 ವಿಶ್ವಕಪ್ ಟೂರ್ನಿಗೆ ಬಾಂಗ್ಲಾದೇಶ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದಷ್ಟೇ ಅಲ್ಲದೇ ಗಾಯದಿಂದ ಚೇತರಿಸಿಕೊಂಡಿರುವ ನುರುಲ್ ಹಸನ್ ಸೋಹಾನ್ ಹಾಗೂ ಲಿಟನ್ ದಾಸ್ ಕೂಡಾ ಚುಟುಕು ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಬಾಂಗ್ಲಾದೇಶ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ.
ಬಾಂಗ್ಲಾದೇಶ ಕ್ರಿಕೆಟ್ ತಂಡ ಹೀಗಿದೆ
ಶಕೀಬ್ ಅಲ್ ಹಸನ್(ನಾಯಕ), ಶಬ್ಬೀರ್ ರೆಹಮಾನ್, ಮೆಹದಿ ಹಸನ್ ಮಿರಾಜ್, ಅಫಿಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಸೈಕತ್, ಲಿಟನ್ ದಾನ್, ಯಾಸಿರ್ ಅಲಿ ಚೌಧರಿ, ನುರುಲ್ ಹಸನ್ ಶೊಹಾನ್, ಮುಷ್ತಾಫಿಜುರ್ ರೆಹಮಾನ್, ಮೊಹಮ್ಮದ್ ಸೈಫುದ್ದೀನ್, ನಸುಮ್ ಅಹಮ್ಮದ್, ಹಸನ್ ಮೊಹಮುದ್, ನಜ್ಮುಲ್ ಹೊಸೈನ್ ಶಾಂಟೋ, ಎಬೊದತ್ ಹೊಸೈನ್, ಟಸ್ಕಿನ್ ಅಹಮ್ಮದ್.
ಮೀಸಲು ಆಟಗಾರರು:
ಸೌಮ್ಯ ಸರ್ಕಾರ್, ಮೆಹದಿ ಹಸನ್, ರಿಶಾದ್ ಹೊಸೈನ್, ಶೌರಿಫುಲ್ಲಾ ಇಸ್ಲಾಂ