ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶ ತಂಡದ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಮಾಡಿ ಗೆದ್ದು ಬೀಗಿದೆ .
ಇತ್ತ ಇದರ ಬೆನ್ನಲ್ಲೇ ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪ್ರಕಟಿಸಿದ್ದು, ಭಾರತೀಯ ಆಟಗಾರರು ಅದ್ಭುತ ಸಾಧನೆ ಮಾಡಿದ್ದಾರೆ.
ಬಾಂಗ್ಲಾದೇಶದ ವಿರುದ್ಧ ನಡೆದ ಟೆಸ್ಟ್ ಪಂದ್ಯಗಳಲ್ಲಿ 11 ವಿಕೆಟ್ ಪಡೆದ ಟೀಂ ಇಂಡಿಯಾ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮತ್ತೊಮ್ಮೆ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೆ ಜಿಗಿದಿದ್ದಾರೆ. 870 ರೇಟಿಂಗ್ಸ್‌ನೊಂದಿಗೆ ನಂ.1 ಸ್ಥಾನದಲ್ಲಿದ್ದ ಭಾರತದ ಅಶ್ವಿನ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.
1 ಸ್ಥಾನ ಕುಸಿತ ಕಂಡಿರುವ ಅಶ್ವಿನ್ 847 ಅಂಕಗಳೊಂದಿಗೆ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.ಇನ್ನೂ ರವಿಂದ್ರ ಜಡೇಜಾ 809 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.
ಇನ್ನು ಬ್ಯಾಟಿಂಗ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಫಿಫ್ಟಿ ಸಿಡಿಸಿ ಯಶಸ್ವಿ ಜೈಸ್ವಾಲ್ ಮಿಂಚಿದ್ದಾರೆ. 2 ಸ್ಥಾನ ಜಿಗಿತ ಕಂಡು ಐಸಿಸಿ ರ‍್ಯಾಂಕಿಂಗ್‌ನಲ್ಲಿ 3ನೇ ಸ್ಥಾನ ಪಡೆದುಕೊಂಡಿದ್ದಾರೆ. ಸತತ 6 ಸ್ಥಾನಗಳಲ್ಲಿ ಏರಿಕೆ ಕಂಡಿರುವ ವಿರಾಟ್ ಕೊಹ್ಲಿ 6ನೇ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಐಸಿಸಿ ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್
1. ಜೋ ರೂಟ್ – ಇಂಗ್ಲೆಂಡ್ – 899 ಅಂಕ
2. ಕೇನ್ ವಿಲಿಯಮ್ಸನ್ – ನ್ಯೂಜಿಲೆಂಡ್ – 829 ಅಂಕ
3. ಯಶಸ್ವಿ ಜೈಸ್ವಾಲ್ – ಭಾರತ – 792 ಅಂಕ
4. ಸ್ಟೀವ್ ಸ್ಮಿತ್ – ಆಸ್ಟ್ರೇಲಿಯಾ – 757 ಅಂಕ
5. ಉಸ್ಮಾನ್ ಖವಾಜ – ಆಸ್ಟ್ರೇಲಿಯಾ – 728 ಅಂಕ