ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂಜಿಲೆಂಡ್ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಆಟಗಾರ ರಿಷಬ್ ಪಂತ್ ಐಸಿಸಿ ಟೆಸ್ಟ್ ರ‍್ಯಾಕಿಂಗ್‌ನಲ್ಲಿ 6ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.
3ನೇ ಸ್ಥಾನದಲ್ಲಿದ್ದ ಯಶಸ್ವಿ ಜೈಸ್ವಾಲ್ 4ನೇ ಸ್ಥಾನಕ್ಕೆ ಕುಸಿದು ನಿರಾಸೆ ಅನುಭವಿಸಿದರೆ, 8 ಸ್ಥಾನ ಕುಸಿತ ಕಂಡಿರುವ ವಿರಾಟ್ ಕೊಹ್ಲಿ ಕಳೆದ 10 ವರ್ಷಗಳಲ್ಲಿ ಇದೇ ಮೊದಲಬಾರಿಗೆ ಟಾಪ್-20 ರ‍್ಯಾಂಕ್‌ನಿಂದಲೇ ಹೊರಬಿದ್ದಿದ್ದಾರೆ.
750 ರೇಟಿಂಗ್ಸ್ ಪಡೆದಿರುವ ರಿಷಬ್ ಪಂತ್ 5 ಸ್ಥಾನಗಳಲ್ಲಿ ಏರಿಕೆ ಕಂಡು 6ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇನ್ನೂ 3ನೇ ಸ್ಥಾನದಲ್ಲಿರುವ ಯಶಸ್ವಿ ಜೈಸ್ವಾಲ್ 777 ರೇಟಿಂಗ್ಸ್‌ನೊಂದಿಗೆ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಆದ್ರೆ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ವಿರಾಟ್ 655 ರೇಟಿಂಗ್ಸ್‌ನೊಂದಿಗೆ 22ನೇ ಸ್ಥಾನಕ್ಕೆ ಕುಸಿದಿದ್ದಾರೆ.