ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿಯ ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳ ಟೆಸ್ಟ್ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ.
ಹೊಸ ಶ್ರೇಯಾಂಕದಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಕುಸಿತ ಕಂಡಿದ್ದಾರೆ. ದಕ್ಷಿಣ ಆಫ್ರಿಕಾದ ನಾಯಕ ಡೀನ್ ಎಲ್ಗರ 4 ಸ್ಥಾನಗಳ ಜಿಗಿತದೊಂದಿಗೆ, ಹೊಸ ಶ್ರೇಯಾಂಕದಲ್ಲಿ ಅಗ್ರ 10 ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿದ್ದಾರೆ.
ಆಸ್ಟ್ರೇಲಿಯದ ಬ್ಯಾಟ್ಸ್‌ಮನ್ ಮಾರ್ನಸ್ ಲ್ಯಾಬುಸ್ಚಾಗ್ನೆ 924 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಟೆಸ್ಟ್ ನಾಯಕ ಜೋ ರೂಟ್ 881 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 871 ರೇಟಿಂಗ್ ಪಾಯಿಂಟ್ ಪಡೆದು 3 ನೇ ಸ್ಥಾನಕ್ಕೆ ಬಂದಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ. ಭಾರತದ ರೋಹಿತ್ ಶರ್ಮಾ 5ನೇ ಸ್ಥಾನದಲ್ಲಿದ್ದಾರೆ.
ವಿರಾಟ್ ಕೊಹ್ಲಿ 9ನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ನಾಯಕ ಬಾಬರ್ ಅಜಮ್ 8ನೇ ಸ್ಥಾನದಲ್ಲಿದ್ದಾರೆ.
ಬೌಲರ್‌ಗಳ ನೂತನ ಟೆಸ್ಟ್ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಇನ್ನೂ 895 ಅಂಕಗಳೊಂದಿಗೆ ಟೆಸ್ಟ್ ಬೌಲಿಂಗ್ನಲ್ಲಿ ಮೊದಲ ಸ್ಥಾನದಲ್ಲಿ ಉಳಿದಿದ್ದಾರೆ. ಭಾರತದ ಅಶ್ವಿನ್ 861 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.