ಹೊಸದಿಗಂತ ಡಿಜಿಟಲ್ ಡೆಸ್ಕ್
ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಇಂದಿನ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಇಂಗ್ಲೆಂಡ್ ಭರ್ಜರಿ ಗೆಲುವು ದಾಖಲಿಸಿದ್ದು, . ಹೀಗಾಗಿ, ಸೆಮಿಫೈನಲ್ಗೆ ಭಾರತ ಪ್ರವೇಶ ಪಡೆದುಕೊಳ್ಳಬೇಕಾದರೆ ಮುಂದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕಿದೆ.
ಪಾಕಿಸ್ತಾನ ವಿರುದ್ಧ 9 ವಿಕೆಟ್ಗಳ ಸುಲಭ ಜಯ ಸಾಧಿಸುವ ಮೂಲಕ ಇಂಗ್ಲೆಂಡ್ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಲಗ್ಗೆ ಹಾಕಿದೆ. ಭಾರತ ಐದನೇ ಸ್ಥಾನಕ್ಕೆ ಕುಸಿದಿದೆ. ಮತ್ತೊಂದು ಪಂದ್ಯದಲ್ಲಿ ಮುಖಾಮುಖಿಯಾಗಿದ್ದ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ಪಂದ್ಯ ಮಳೆಯಿಂದಾಗಿ ರದ್ಧುಗೊಂಡಿದೆ. ಉಭಯ ತಂಡಗಳಿಗೆ ತಲಾ 1 ಅಂಕ ನೀಡಲಾಗಿದೆ.
ದಕ್ಷಿಣ ಆಫ್ರಿಕಾ ಈಗಾಗಲೇ ಸಮಿಫೈನಲ್ ಪ್ರವೇಶಿಸಿದ್ದು, ವೆಸ್ಟ್ ಇಂಡೀಸ್ ತಂಡ ಆಡಿರುವ ಎಲ್ಲ ಪಂದ್ಯಗಳಿಂದ 7 ಅಂಕಗಳಿಕೆ ಮಾಡಿದ್ದು, ಸೆಮೀಸ್ ಸ್ಥಾನ ಇತರೆ ತಂಡಗಳ ಪಂದ್ಯಗಳ ಫಲಿತಾಂಶದ ಮೇಲೆ ನಿರ್ಧಾರವಾಗಲಿದೆ.
ನ್ಯೂಜಿಲ್ಯಾಂಡ್, ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು ಈಗಾಗಲೇ ಪ್ರಶಸ್ತಿ ರೇಸ್ನಿಂದ ಹೊರಬಿದ್ದಿವೆ.ಆಸ್ಟ್ರೇಲಿಯಾ ಮೊದಲ ತಂಡವಾಗಿ ಸೆಮಿಫೈನಲ್ ಪ್ರವೇಶ ಪಡೆದುಕೊಂಡಿದೆ. ಉಳಿದಂತೆ 9 ಪಾಯಿಂಟ್ ಗಳಿಕೆ ಮಾಡಿರುವ ಆಫ್ರಿಕಾ ಕೂಡ ಎರಡನೇ ತಂಡವಾಗಿ ನಾಲ್ಕರ ಘಟ್ಟ ಪ್ರವೇಶಿಸಿದೆ.
ನಾಲ್ಕರ ಸ್ಥಾನಕ್ಕಾಗಿ ಇದೀಗ ವೆಸ್ಟ್ ಇಂಡೀಸ್, ಭಾರತ ಮತ್ತು ಇಂಗ್ಲೆಂಡ್ ನಡುವೆ ಫೈಟ್ ಏರ್ಪಟ್ಟಿದೆ. ಈ ತಂಡಗಳು ಕ್ರಮವಾಗಿ 3,4 ಮತ್ತು 5ನೇ ಸ್ಥಾನದಲ್ಲಿದ್ದು, ವೆಸ್ಟ್ ಇಂಡೀಸ್ ಈಗಾಗಲೇ ಎಲ್ಲ ಪಂದ್ಯಗಳನ್ನಾಡಿ 7 ಅಂಕ ಗಳಿಸಿದೆ. ಆದರೆ, ಭಾರತ ಮತ್ತು ಇಂಗ್ಲೆಂಡ್ಗೆ ಇನ್ನೂ ಒಂದು ಪಂದ್ಯ ಬಾಕಿ ಉಳಿದಿದ್ದು, ಇಲ್ಲಿ ಗೆಲುವು ಅನಿವಾರ್ಯ.
ನಾಲ್ಕರ ಹಂತಕ್ಕೆ ಬರಲು ಭಾರತ ಮಹಿಳಾ ತಂಡ ಲಗ್ಗೆ ಹಾಕಲು ಮುಂದಿನ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಾಡಬೇಕಿದೆ. ದ.ಆಫ್ರಿಕಾ ಈಗಾಗಲೇ ತಾನಾಡಿರುವ 6 ಪಂದ್ಯಗಳ ಪೈಕಿ 4ರಲ್ಲಿ ಗೆಲುವು ಪಡೆದಿದ್ದು, ಟೀಂ ಇಂಡಿಯಾಗೆ ಕಠಿಣ ಸವಾಲು ನೀಡುವ ಸಾಧ್ಯತೆ ಇದೆ.