Tuesday, December 30, 2025

ಐಸಿಸಿ ಮಹಿಳಾ ಟಿ20 Ranking: ಶಫಾಲಿ ವರ್ಮಾ, ರೇಣುಕಾ ಸಿಂಗ್‌ ಗೆ ಗುಡ್ ನ್ಯೂಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಐಸಿಸಿ ಮಹಿಳಾ ಟಿ20ಐ ಶ್ರೇಯಾಂಕದಲ್ಲಿ ಭಾರತದ ಶಫಾಲಿ ವರ್ಮಾ ಹಾಗೂ ರೇಣುಕಾ ಸಿಂಗ್‌ ಏರಿಕೆ ಕಂಡಿದ್ದಾರೆ.

ಟಿ20ಐ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಶಫಾಲಿ ವರ್ಮಾ ನಾಲ್ಕು ಸ್ಥಾನಗಳಲ್ಲಿ ಏರಿಕೆ ಕಂಡು 6ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಬಲಗೈ ಬ್ಯಾಟ್ಸ್‌ವುಮೆನ್‌ ಸದ್ಯ 60 ಪಾಯಿಂಟ್ಸ್‌ ರೇಟಿಂಗ್‌ ಹೊಂದಿದ್ದಾರೆ. ಆಸ್ಟ್ರೇಲಿಯಾದ ಬೆತ್‌ ಮೂನಿ ಅಗ್ರ ಸ್ಥಾನದಲ್ಲಿದ್ದಾರೆ. ಭಾರತದ ಉಪ ನಾಯಕಿ ಸ್ಮೃತಿ ಮಂಧಾನಾ ಅವರು ಮೂರನೇ ಸ್ಥಾನದಲ್ಲಿದ್ದರೆ, ಹರ್ಮನ್‌ಪ್ರೀತ್‌ ಕೌರ್‌ 15ನೇ ಶ್ರೇಯಾಂಕದಲ್ಲಿದ್ದಾರೆ.

ಇನ್ನು ಭಾರತ ತಂಡದ ವೇಗದ ಬೌಲರ್‌ ರೇಣುಕಾ ಸಿಂಗ್‌ ಅವರು ಟಿ20ಐ ಬೌಲರ್‌ಗಳ ಶ್ರೇಯಾಂಕದಲ್ಲಿ 7ನೇ ಶ್ರೇಯಾಂಕಕ್ಕೆ ಲಗ್ಗೆ ಇಟ್ಟಿದ್ದಾರೆ.

ರಿಚಾ ಘೋಷ್ ಟಿ20ಐ ಬ್ಯಾಟಿಂಗ್ ಶ್ರೇಯಾಂಕದಲ್ಲಿ ತನ್ನ ಏರಿಕೆಯನ್ನು ಮುಂದುವರಿಸಿದ್ದಾರೆ, ಏಳು ಸ್ಥಾನಗಳ ಜಿಗಿತವನ್ನು ಸಾಧಿಸಿ 20ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಇದರ ನಡುವೆ ಎಡಗೈ ಸ್ಪಿನ್ನರ್ ಶ್ರೀ ಚರಣಿ ಬೌಲರ್‌ಗಳ ಶ್ರೇಯಾಂಕದಲ್ಲಿ 17 ಸ್ಥಾನಗಳ ಏರಿಕೆಯಾಗಿ 52ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

ಟಿ20ಐ ಬೌಲರ್‌ಗಳ ಪಟ್ಟಿಯಲ್ಲಿ ದೀಪ್ತಿ ಶರ್ಮಾ ಅಲ್ಪ ಮುನ್ನಡೆ ಕಾಯ್ದುಕೊಂಡಿದ್ದರೆ, ವೆಸ್ಟ್ ಇಂಡೀಸ್‌ನ ತಾರೆ ಹೇಲಿ ಮ್ಯಾಥ್ಯೂಸ್ ಟಿ20ಐ ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಆರಾಮವಾಗಿ ಮುಂದಿದ್ದಾರೆ.

error: Content is protected !!