ಐಸಿಸಿ ಮಹಿಳಾ ಟಿ20 ವಿಶ್ವಕಪ್‌: ಐರ್ಲೆಂಡ್ ವಿರುದ್ಧ ಟಾಸ್ ಗೆದ್ದ ಇಂಡಿಯಾ ಬ್ಯಾಟಿಂಗ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿಂದು ಐರ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಮಹಿಳಾ ತಂಡದ ನಾಯಕ ಹರ್ಮನ್‌ಪ್ರೀತ್ ಕೌರ್, ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು,ರಾಧಾ ಯಾದವ್ ಬದಲಿಗೆ ದೇವಿಕಾ ವೈದ್ಯ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ಮಹಿಳಾ ಕ್ರಿಕೆಟ್‌ ತಂಡವು ‘ಬಿ’ ಗುಂಪಿನಲ್ಲಿ ಸದ್ಯ ಮೂರು ಪಂದ್ಯಗಳನ್ನಾಡಿ ಎರಡು ಗೆಲುವು ಹಾಗೂ ಒಂದು ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇಂದು ಐರ್ಲೆಂಡ್ ಎದುರು ಗೆಲುವು ಸಾಧಿಸಿದರೆ, ಸೆಮಿಫೈನಲ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಈಗಾಗಲೇ ‘ಬಿ’ ಗುಂಪಿನಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ಇಂಗ್ಲೆಂಡ್ ತಂಡವು ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!