ಐಸಿಸಿ ಮಹಿಳೆಯರ ಟಿ20 ವಿಶ್ವಕಪ್‌: ಪಾಕ್ ವಿರುದ್ಧ ಗೆದ್ದು ಶುಭಾರಂಭ ಮಾಡಿದ ಟೀಮ್ ಇಂಡಿಯಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಐಸಿಸಿ ಮಹಿಳೆಯರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಗೆಲುವಿನ ಅಭಿಯಾನ ಆರಂಭಿಸಿದೆ.

ಬೌಲರ್‌ಗಳ ಸಂಘಟಿತ ಪ್ರದರ್ಶನ ಹಾಗೂ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ಎಚ್ಚರಿಕೆಯ ಬ್ಯಾಟಿಂಗ್‌ ನೆರವಿನಿಂದ ಭಾರತ ತಂಡ ಪಾಕಿಸ್ತಾನ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿದೆ.

ನ್ಯೂಲ್ಯಾಂಡ್ಸ್‌ ಮೈದಾನದಲ್ಲಿ ಭಾನುವಾರ ನಡೆದ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ತಂಡ ನಾಯಕಿ ಮರೂಫ್‌ (68ರನ್‌, 55 ಎಸೆತ, 7 ಬೌಂಡರಿ) ಅರ್ಧಶತಕದ ನೆರವಿನಿಂದ 4 ವಿಕೆಟ್‌ಗೆ 149 ರನ್‌ಗಳ ಸಾಧಾರಣ ಮೊತ್ತ ಪೇರಿಸಿತು.

ಪ್ರತಿಯಾಗಿ ಭಾರತ ತಂಡ ಜೆಮಿಮಾ ರೋಡ್ರಿಗಸ್‌ (53*ರನ್‌, 38 ಎಸೆತ, 8 ಬೌಂಡರಿ) ಅಜೇಯ ಅರ್ಧಶತಕದ ನೆರವಿನಿಂದ ಇನ್ನೂ ಒಂದು ಓವರ್‌ ಬಾಕಿ ಇರುವಂತೆಯೇ 19 ಓವರ್‌ಗಳಲ್ಲಿ 3 ವಿಕೆಟ್‌ಗೆ 151 ರನ್‌ ಬಾರಿಸಿ ಗೆಲುವು ಕಂಡಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!