Thursday, March 30, 2023

Latest Posts

ಐಸಿಸಿ ಮಹಿಳಾ ಟಿ20 ವಿಶ್ವಕಪ್: ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬ್ಯಾಟಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

2023ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ತಂಡ ವೆಸ್ಟ್ ಇಂಡೀಸ್ ವಿರುದ್ಧ ಆಡುತ್ತಿದೆ.
ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕಿ ಹೇಯಾಲಿ ಮ್ಯಾಥ್ಯೂಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದು, ಹೀಗಾಗಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳೆಯರು ತಮ್ಮ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಗಳಿಸುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಯಶಸ್ವಿಯಾಗಿ ಆರಂಭಿಸಿದೆ.

ಭಾರತ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್(ನಾಯಕಿ), ರಿಚಾ ಘೋಷ್(ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ದೇವಿಕಾ ವೈದ್ಯ, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್, ರೇಣುಕಾ ಸಿಂಗ್ ಠಾಕೂರ್.

ವೆಸ್ಟ್ ಇಂಡೀಸ್: ಹೇಲಿ ಮ್ಯಾಥ್ಯೂಸ್ (ನಾಯಕಿ), ಸ್ಟಾಫನಿ ಟೇಲರ್, ಶೆಮೈನ್ ಕ್ಯಾಂಪ್ಬೆಲ್ಲೆ, ಶಬಿಕಾ ಗಜ್ನಾಬಿ, ಚಿನೆಲ್ಲೆ ಹೆನ್ರಿ, ಚೆಡಿಯನ್ ನೇಷನ್, ಅಫಿ ಫ್ಲೆಚರ್, ಶಾಮಿಲಿಯಾ ಕಾನ್ನೆಲ್, ರಶಾದಾ ವಿಲಿಯಮ್ಸ್ (ವಿಕೆಟ್ ಕೀಪರ್), ಕರಿಷ್ಮಾ ರಾಮ್ಹರಾಕ್, ‍ಷೇಕೆರಾ ಸೆಲ್ಮನ್.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!