2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ಗೆ ಭಾರತ ಆತಿಥ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್
2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ಗೆ ಭಾರತ ಆತಿಥ್ಯ ವಹಿಸಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರಕಟಿಸಿದೆ.
2024- 27 ರ ವರೆಗೆ ನಡೆಯಲಿರುವ ಐಸಿಸಿ ಮಹಿಳಾ ಕ್ರಿಕೆಟ್‌ ನ ಪ್ರಮುಖ ಟೂರ್ನಿಗಳ ಆತಿಥ್ಯ ಏಷ್ಯಾ ಖಂಡದ ಪಾಲಾಗಿದೆ.  2024ರ ಮಹಿಳಾ ಟಿ20 ವಿಶ್ವಕಪ್‌ಗೆ ಬಾಂಗ್ಲಾದೇಶ ಆತಿಥ್ಯ ವಹಿಸಲಿದೆ. 2025 ರ ಮಹಿಳಾ ಏಕದಿನ ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲಾಗುವುದು. ಐಸಿಸಿ 2027 ರಲ್ಲಿ ಮೊಟ್ಟ ಮೊದಲಬಾರಿಗೆ T20 ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸುತ್ತಿದ್ದು, ಇದರ ಆತಿಥ್ಯ ಶ್ರೀಲಂಕಾ ಪಾಲಾಗಿದೆ (ಪರಿಸ್ಥಿತಿ ಸುಧಾರಣೆ ಕಂಡಿದ್ದರೆ). ಇನ್ನು 2026ರ ಟಿ.20 ವಿಶ್ವಕಪ್‌ ಅನ್ನು ಇಂಗೆಂಡ್‌ ನಲ್ಲಿ ಆಯೋಜಿಸಲಾಗುತ್ತಿದೆ ಎಂದು ಐಸಿಸಿ ದೃಢಪಡಿಸಿದೆ.
“ನಾವು ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಅನ್ನು ಆಯೋಜಿಸಲು ಉತ್ಸುಕರಾಗಿದ್ದೇವೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಹರ್ಷ ವ್ಯಕ್ತಪಡಿಸಿದ್ದಾರೆ.
ಭಾರತವು ಈ ವರೆಗೆ ಮೂರು ಏಕದಿನ ವಿಶ್ವಕಪ್‌ ಹಾಗೂ ಒಂದು ಟಿ20 ವಿಶ್ವಕಪ್‌ ಗೆ ಆತಿಥ್ಯ ವಹಿಸಿದೆ. 2013 ರಲ್ಲಿ ಪುರುಷರ ಏಕದಿನ ವಿಶ್ವಕಪ್‌, 2015 ರಲ್ಲಿ ಮಹಿಳೆಯರ ಏಕದಿನ ವಿಶ್ವಕಪ್‌, 2016 ರಲ್ಲಿ ಪುರುಷರ ಟಿ.೨೦ ವಿಶ್ವಕಪ್‌ ಭಾರತದಲ್ಲಿ ನಡೆದಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!