ICSE 10ನೇ ತರಗತಿ, ದ್ವಿತೀಯ ಪಿಯು ಫಲಿತಾಂಶ ಪ್ರಕಟ, ವಿದ್ಯಾರ್ಥಿನಿಯರದ್ದೇ ಮೇಲುಗೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ (CISCE) ಐಸಿಎಸ್‌ಇ 10ನೇ ತರಗತಿ ಫಲಿತಾಂಶವನ್ನು ಇಂದು ಪ್ರಕಟ ಮಾಡಿದೆ. ಈ ಬಾರಿ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಐಸಿಎಸ್‌ಇ ಯ ಅಧಿಕೃತ ವೆಬ್‌ಸೈಟ್ cisce.org ನಲ್ಲಿ ಫಲಿತಾಂಶ ಪರಿಶೀಲಿಸಬಹುದು. results.cisce.org ಈ ವೆಬ್‌ಸೈಟ್‌ನಲ್ಲೂ ಫಲಿತಾಂಶ ನೋಡಬಹುದು.

ಈ ಬಾರಿ ಶೇ 99.09 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಐಸಿಎಸ್‌ಇ 10ನೇ ತರಗತಿ ಹಾಗೂ ಐಎಸ್‌ಸಿ 12ನೇ ತರಗತಿ ಶೇ 99.02 ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಫೆಬ್ರವರಿ 18ರಂದು ಪ್ರಾರಂಭವಾಗಿ ಮಾರ್ಚ್ 27ಕ್ಕೆ ಪರೀಕ್ಷೆಗಳು ಮುಕ್ತಾಯಗೊಂಡಿದ್ದವು. 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 13ರಂದು ಪ್ರಾರಂಭವಾಗಿ ಏಪ್ರಿಲ್ 5ರಂದು ಮುಕ್ತಾಯ ಆಗಿದ್ದವು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!