RECRUITMENT | ಐಡಿಬಿಐ ಬ್ಯಾಂಕ್‌ ನಲ್ಲಿ 600 ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಐಡಿಬಿಐ ಬ್ಯಾಂಕ್‌ ನಲ್ಲಿ 600 ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ ವಿದ್ಯಾರ್ಹತೆ ಜೊತೆಗೆ ಜನವರಿ 1,2023ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿದಾರರು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್‌ ಪರೀಕ್ಷೆ, ದಾಖಲೆ ಪರಿಶೀಲನೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 28,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!