ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯನಾಡಿನಲ್ಲಿ ಸಂಭವಿಸಿದ ಜಲಸ್ಫೋಟ-ಗುಡ್ಡ ಕುಸಿತ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಕೊಡಗಿನಲ್ಲಿ 104 ಸಂಭವನೀಯ ಭೂಕುಸಿತ-ಪ್ರವಾಹ ಪ್ರದೇಶಗಳನ್ನು ಗುರುತು ಮಾಡಿದೆ. ಈ ಸ್ಥಳಗಳಲ್ಲಿರುವ ಕುಟುಂಬದವರನ್ನು ಬೇರೆ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ.
ಒಟ್ಟಾರೆ 2,995 ಕುಟುಂಬಗಳ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ ಈ ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ತಿಂಗಳು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಜಿಲ್ಲಾಡಳಿತವು ಸಂಭಾವ್ಯ ಭೂಕುಸಿತದ ಪ್ರದೇಶಗಳಲ್ಲಿ ನೆಲೆಗೊಂಡಿರುವ 2,995 ಕುಟುಂಬಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಲು ನೋಟಿಸ್ ನೀಡಿದೆ.
ಈ ಹಿಂದಿನ ವಿಪತ್ತು ವರದಿಗಳು ಮತ್ತು ಸಮೀಕ್ಷೆಗಳ ಆಧಾರದ ಮೇಲೆ ಈ ಪ್ರದೇಶಗಳನ್ನು ಗುರುತಿಸಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸ್ಥಳಾಂತರಿಸಬೇಕಾದ ಕುಟುಂಬಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕುಟುಂಬಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.