ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹದೇವಪುರ ವಲಯದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಸೂಕ್ತ ಸ್ಥಳಗಳನ್ನು ಗುರುತಿಸುವಂತೆ ಅಧಿಕಾರಿಗಳಿಗ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಸೂಚನೆ ನೀಡಿದರು.
ಮಹದೇವಪುರ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ, ನಿವಾಸಿಯೊಬ್ಬರು ‘ಸಾರ್ವಜನಿಕ ಶೌಚಾಲಯ’ ನಿರ್ಮಿಸಲು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಗಿರಿನಾಥ್ ಅವರು, ಪಾಲಿಕೆ ವ್ಯಾಪ್ತಿಯಲ್ಲಿ 200 ಹೊಸ ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಖಾಲಿ ಜಾಗ/ ಸಾರ್ವಜನಿಕ ಸ್ಥಳಗಳನ್ನು ಗುರುತಿಸಬೇಕು. ಆ ಬಳಿಕ ಟೆಂಡರ್ ಕರೆದು ಕಾಲಮಿತಿಯೊಳಗಾಗಿ ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.