ನಿಮ್ಮ ರಾಜ್ಯದಲ್ಲಿರುವ ಪಾಕ್‌ ಪ್ರಜೆಗಳನ್ನು ಗುರುತಿಸಿ: ಮುಖ್ಯಮಂತ್ರಿಗಳಿಗೆ ಅಮಿತ್‌ ಶಾ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತಕ್ಕ ಶಿಕ್ಷೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಈ ವಿಷಯದಲ್ಲಿ ರಾಜ್ಯಗಳು ಸಮನ್ವಯ ಸಾಧಿಸಲು ಕೇಳಿಕೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತಿದ್ದು, ಆಯಾ ರಾಜ್ಯಗಳಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರು ಪಾಕಿಸ್ತಾನಕ್ಕೆ ಶೀಘ್ರ ಮರಳುವಂತೆ ಸೂಚಿಸಲು ಕೇಳಿಕೊಳ್ಳುತ್ತಿದ್ದಾರೆ.

ಬಹುತೇಕ ಪ್ರವಾಸಿಗರು ಸೇರಿದಂತೆ 26 ಮಂದಿಯನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾದ ಕಾರಣ, ಇದೇ ಏಪ್ರಿಲ್ 27 ರಿಂದ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ರದ್ದುಗೊಳಿಸುವುದಾಗಿ ಭಾರತ ಘೋಷಿಸಿತ್ತು. ಅದರ ಜೊತೆಗೆ ಪಾಕಿಸ್ತಾನದಲ್ಲಿ ವಾಸಿಸುವ ಭಾರತೀಯ ಪ್ರಜೆಗಳು ಆದಷ್ಟು ಬೇಗನೆ ತವರುದೇಶಕ್ಕೆ ಮರಳುವಂತೆ ಸಲಹೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!