ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ವಿಚಾರವಾಗಿ ವಕ್ಫ್ ಬೋರ್ಡ್ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿದೆ.
ಪ್ರಕರಣ ಸಂಬಂಧ ಇಬ್ಬರು ನ್ಯಾಯಮೂರ್ತಿಗಳ ನಡುವೆ ಒಮ್ಮತ ಮೂಡದ ಕಾರಣ ಮುಖ್ಯ ನ್ಯಾಯಾಧೀಶರ ನೇತೃತ್ವದ ಪೀಠಕ್ಕೆ ವಿಚಾರಣೆ ವರ್ಗಾವಣೆಗೊಂಡಿದೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಸ್ಲಿಂ ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
ಸುಪ್ರೀಂ ಕೋರ್ಟ್ ನ ದ್ವಿಸದಸ್ಯ ನ್ಯಾಯಪೀಠವು, ಈದ್ಗಾ ಮೈದಾನದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದಂತ ಗಣೇಶೋತ್ಸವ ಆಚರಣೆಗೆ ಮಧ್ಯಂತರ ಆದೇಶದ ಮೂಲಕ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ ಈಗ ಸುಪ್ರೀಂ ಕೋರ್ಟ್ ನ ಸಿಐಜೆ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆಗೊಂಡಿದೆ.
ಚಾಮರಾಜಪೇಟೆ ಮೈದಾನದ ಸುತ್ತಮುತ್ತ ಬೀಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, 3 ಡಿಸಿಪಿ, 21 ಎಸಿಪಿ, 47 ಇನ್ಸ್ಪೆಕ್ಟರ್ಗಳು, 130 ಪಿಎಸ್ಐ, 126 ASI, 900 ಕಾನ್ಸ್ಟೇಬಲ್ಗಳು, 120 RAF ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.