May 28, 2026
Thursday, May 28, 2026
spot_img

‘ಇದು ಆಡಳಿತವಲ್ಲ, ಲೂಟಿ’: ಹೀಗ್ಯಾಕಂದ್ರು ಸಿಎಂ ಸಾಹೇಬ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯನ್ನು ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಯ ವಿಷಯವನ್ನಾಗಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ಮುಗಿದ ತಕ್ಷಣ ಬೆಲೆ ಏರಿಕೆ ಮಾಡಿರುವ ಕ್ರಮವನ್ನು ಟೀಕಿಸಿರುವ ಅವರು, ಇದು ಸಾಮಾನ್ಯ ಜನರ ಮೇಲೆ ಮತ್ತೊಂದು ಆರ್ಥಿಕ ಹೊರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಕೆಲವೇ ತಿಂಗಳಲ್ಲಿ ವಾಣಿಜ್ಯ ಎಲ್‌ಪಿಜಿ ದರವನ್ನು ಹಲವು ಬಾರಿ ಹೆಚ್ಚಿಸಲಾಗಿದ್ದು, ಒಟ್ಟಾರೆ ಭಾರೀ ಪ್ರಮಾಣದ ಹೆಚ್ಚಳ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾಗತಿಕ ಪರಿಸ್ಥಿತಿಯನ್ನು ನೆಪವನ್ನಾಗಿ ಮಾಡಿಕೊಂಡು ಜನರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಈ ದರ ಏರಿಕೆಯಿಂದ ಹೋಟೆಲ್‌ಗಳು, ಸಣ್ಣ ವ್ಯಾಪಾರಿಗಳು ಹಾಗೂ ಆಹಾರ ವಲಯದ ಮೇಲಿನ ಒತ್ತಡ ಹೆಚ್ಚಲಿದ್ದು, ಅದರ ಪರಿಣಾಮವಾಗಿ ದಿನನಿತ್ಯ ಬಳಕೆಯ ಆಹಾರ ಪದಾರ್ಥಗಳ ಬೆಲೆಯೂ ಏರಿಕೆಯಾಗುವ ಸಾಧ್ಯತೆ ಇದೆ. ಕೊನೆಗೆ ಇದರ ಹೊರೆ ಸಾಮಾನ್ಯ ಜನರ ಮೇಲೇ ಬೀಳಲಿದೆ ಎಂಬ ಆತಂಕ ವ್ಯಕ್ತವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !