ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಲೂಚಿಸ್ತಾನದ ಕ್ವೆಟ್ಟಾ ಬಳಿಯ ಮಾರ್ಗತ್ ಪ್ರದೇಶದಲ್ಲಿ ಪಾಕಿಸ್ತಾನಿ ಸೇನಾ ಪಡೆಯ ಮೇಲೆ ಬಲೂಚ್ ಲಿಬರೇಶನ್ ಆರ್ಮಿ ದಾಳಿ ನಡೆಸಿದ್ದು, ಪಾಕ್ ಸೇನೆಯ 10 ಸಿಬ್ಬಂದಿಯನ್ನು ಹತ್ಯೆ ಮಾಡಿದೆ.
ಪಾಕ್ ಸೇನೆಯ ಸುಬೇದಾರ್ ಶೆಹಜಾದ್ ಅಮೀನ್, ನಯಬ್ ಸುಬೇದಾರ್ ಅಬ್ಬಾಸ್, ಸಿಪಾಯಿ ಖಲೀಲ್, ಸಿಪಾಯಿ ಜಾಹಿದ್, ಸಿಪಾಯಿ ಖುರ್ರಂ ಮತ್ತು ಇತರರು ಹತ್ಯೆಗೀಡಾಗಿದ್ದಾರೆ.
ಕ್ವೆಟ್ಟಾದ ಉಪನಗರವಾದ ಮಾರ್ಗತ್ನಲ್ಲಿ ಬಲೂಚ್ ಲಿಬರೇಶನ್ ಆರ್ಮಿ ಆಕ್ರಮಿತ ಪಾಕಿಸ್ತಾನಿ ಸೇನೆಯ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ರಿಮೋಟ್ ಕಂಟ್ರೋಲ್ಡ್ ಐಇಡಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಎಲ್ಲಾ 10 ಸಿಬ್ಬಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಗುಂಪಿನ ವಕ್ತಾರ ಜೀಯಂಡ್ ತಿಳಿಸಿದ್ದಾರೆ.