ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಲೂಚಿಸ್ತಾನದ ಕಚ್ಚಿ ಜಿಲ್ಲೆಯ ಮಾಚ್ ಪ್ರದೇಶದಲ್ಲಿ ಪಾಕಿಸ್ತಾನಿ ಸೇನಾ ವಾಹನದ ಮೇಲೆ ಬಲೂಚ್ ಲಿಬರೇಶನ್ ಆರ್ಮಿ ಐಇಡಿ ದಾಳಿ ನಡೆಸಿದ್ದು, 12 ಮಂದಿ ಪಾಕ್ ಸೈನಿಕರನ್ನು ಹತ್ಯೆ ಮಾಡಿದೆ.
ಬಲೂಚ್ ಭಯೋತ್ಪಾದಕರು ಪಾಕ್ ಸೇನಾ ವಾಹನವನ್ನು ಗುರಿಯಾಗಿಸಿ ಈ ದಾಳಿ ನಡೆಸಿದ್ದಾರೆ. ಈ ವೇಳೆ ವಿಶೇಷ ಕಾರ್ಯಾಚರಣೆ ಕಮಾಂಡರ್ ತಾರಿಕ್ ಇಮ್ರಾನ್ ಮತ್ತು ಸುಬೇದಾರ್ ಉಮರ್ ಫಾರೂಕ್ ಸೇರಿದಂತೆ 12 ಸೈನಿಕರು ಸಾವನ್ನಪ್ಪಿದ್ದಾರೆ.
ಒಂದು ವಾರದ ಹಿಂದೆಯಷ್ಟೇ ಬಲೂಚಿಸ್ತಾನ ಪ್ರಾಂತ್ಯದ ಕಚ್ ಮತ್ತು ಜಿಯಾರತ್ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಪಾಕಿಸ್ತಾನ ಭದ್ರತಾ ಪಡೆಗಳು 10 ಉಗ್ರರನ್ನ ಕೊಂದಿದ್ದವು, ಇದಕ್ಕೆ ಪ್ರತೀಕಾರವಾಗಿ ಬಲೂಚ್ ಉಗ್ರರು ಐಇಡಿ ದಾಳಿ ನಡೆಸಿದ್ದಾರೆ.