ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಐಇಡಿ ಸ್ಫೋಟ : 4 ಮಂದಿ ಸಾವು, 14 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪಾಕಿಸ್ತಾನದ ಬಲೂಚಿಸ್ತಾನ ಪ್ರದೇಶದ ಮಾರುಕಟ್ಟೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದ ಬಾಂಬ್‌ ಸ್ಫೋಟದಲ್ಲಿ  ನಾಲ್ವರು ಸಾವಿಗೀಡಾಗಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯಲ್ಲಿ ಮೋಟಾರ್ ಸೈಕಲ್‌ನಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಅಳವಡಿಸಿ ಸ್ಫೋಟ ನಡೆಸಲಾಗಿದೆ. ದುರ್ಘಟನೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದು, ಮತ್ತೋರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬರ್ಖಾನ್ ಉಪ ಆಯುಕ್ತ ಅಬ್ದುಲ್ಲಾ ಖೋಸೊ ಡಾನ್ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಯಾವುದೇ ಭಯೋತ್ಪಾದಕ ಸಂಘಟನೆಗಳು ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!