ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಉಗ್ರರು ಮಂಗಳವಾರ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಿಸಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಅಖ್ನೂರ್ ಸೆಕ್ಟರ್ನ ಲಲೇಲಿ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಶಂಕಿತ ಐಇಡಿ ಸ್ಫೋಟ ಸಂಭವಿಸಿದೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಹುತಾತ್ಮ ಸೈನಿಕರ ಗುರುತನ್ನು ಖಚಿತಪಡಿಸಲಾಗುತ್ತಿದೆ. ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ಪ್ರದೇಶಕ್ಕೆ ರವಾನಿಸಲಾಗಿದ್ದು, ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಸೇನೆ ತಿಳಿಸಿದೆ.