ಜಾರ್ಖಂಡ್​ನಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಮೂವರು ಯೋಧರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾರ್ಖಂಡ್ನಲ್ಲಿ ನಕ್ಸಲರು ಐಇಡಿ ಸ್ಫೋಟಗೊಳಿಸಿದ ಪರಿಣಾಮ ​ಮೂವರು ಯೋಧರು ಗಾಯಗೊಂಡಿರುವ ಘಟನೆ ಬಲಿಬಾ ಪ್ರದೇಶದಲ್ಲಿ ನಡೆದಿದೆ, ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಸ್ಫೋಟದ ನಂತರ, ಗಾಯಗೊಂಡ ಸೈನಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ರಾಂಚಿಗೆ ವಿಮಾನದ ಮೂಲಕ ಸಾಗಿಸಲಾಗಿದೆ.

ದಾಳಿಯನ್ನು ದೃಢಪಡಿಸಿದ  ಅಶುತೋಷ್ ಶೇಖರ್, ನಕ್ಸಲ್ ಚಟುವಟಿಕೆಗಳನ್ನು ಎದುರಿಸಲು ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ತೀವ್ರಗೊಳಿಸುತ್ತಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!