ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್‌ನಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯ ಸಮಯ ಐಇಡಿ ಸ್ಫೋಟಗೊಂಡಿದ್ದು, ಇದರಿಂದ ಗಾಯಗೊಂಡಿದ್ದ ಸಿಆರ್‌ಪಿಎಫ್ (CRPF) ಜವಾನರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು (IED Blast) ಶನಿವಾರ ತಿಳಿಸಿದ್ದಾರೆ.
ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಜರೈಕೇಲಾ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಡೇರಾ-ಸಮತಾ ಅಕ್ಷದ ಮಾವೋವಾದಿ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಶುಕ್ರವಾರ ಅರೆಸೈನಿಕ ಪಡೆ ಕಾರ್ಯಾಚರಣೆಯನ್ನು ಕೈಗೊಂಡಿದೆ.
ಈ ಸಮಯದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ)ದಿಂದ ಹೆಡ್ ಕಾನ್‌ಸ್ಟೆಬಲ್ ಮಹೇಂದ್ರ ಲಸ್ಕರ್ (45) ಗಾಯಗೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಸ್ಕರ್ ಅಸ್ಸಾಂ ಮೂಲದವರಾಗಿದ್ದು, ಸಿಆರ್‌ಪಿಎಫ್‌ನ 60 ನೇ ಬೆಟಾಲಿಯನ್‌ಗೆ ಸೇರಿದವರು.