ಛತ್ತೀಸ್‍ಗಢದಲ್ಲಿ ಐಇಡಿ ಸ್ಫೋಟ: ಇಬ್ಬರು ಕಾರ್ಮಿರು ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಬ್ಬಿಣದ ಅದಿರು ಗಣಿಯೊಂದರ ಬಳಿ ಸುಧಾರಿತ ಸ್ಫೋಟಕ ಸ್ಫೋಟದಿಂದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಛತ್ತೀಸ್‍ಗಢದ ನಾರಾಯಣಪುರ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ನಾರಾಯಣಪುರದ ರಿತೇಶ್ ಗಗ್ಡಾ (21) ಮತ್ತು ಶ್ರವಣ್ ಗಗ್ಡಾ (24) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡವನನ್ನು ಉಮೇಶ್ ರಾಣಾ ಎಂದು ಗುರುತಿಸಲಾಗಿದೆ. ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದ ರಾಜಧಾನಿ ರಾಯ್‍ಪುರದಿಂದ ಸುಮಾರು 350 ಕಿ.ಮೀ ದೂರದಲ್ಲಿರುವ ಆಮ್ಡೈ ಘಾಟಿ ಕಬ್ಬಿಣದ ಅದಿರು ಗಣಿಗೆ ಮೂವರು ಕಾರ್ಮಿಕರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಅಲ್ಲಿನ ಸರ್ಕಾರ ಜೆಎನ್‍ಐಎಲ್ ಸಂಸ್ಥೆಗೆ ಈ ಕಬ್ಬಿಣದ ಅದಿರು ಗಣಿ ನೀಡಿದೆ. ಈ ಯೋಜನೆಗೆ ಮಾವೋವಾದಿಗಳ ವಿರೋಧವಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟ ನಡೆದ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಈ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!