Friday, December 8, 2023

Latest Posts

ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟ: ಬಿಎಸ್‌ಎಫ್ ಕಾನ್‌ಸ್ಟೇಬಲ್, ಇಬ್ಬರು ಮತಗಟ್ಟೆ ಅಧಿಕಾರಿಗಳಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಸೋಮವಾರ ನಡೆದ ಐಇಡಿ ಸ್ಫೋಟದಲ್ಲಿ ಬಿಎಸ್‌ಎಫ್ ಕಾನ್‌ಸ್ಟೇಬಲ್ ಮತ್ತು 2 ಮತಗಟ್ಟೆ ತಂಡದ ಸದಸ್ಯರು ಗಾಯಗೊಂಡಿದ್ದಾರೆ.

ಬಿಎಸ್‌ಎಫ್ ಮತ್ತು ಜಿಲ್ಲಾ ಪಡೆಗಳ ಜಂಟಿ ತಂಡವು ಕಂಕೇರ್ ಜಿಲ್ಲೆಯ ಛೋಟೆಬೆಟಿಯಾ ಪೊಲೀಸ್ ಠಾಣೆಯಿಂದ 4 ಮತಗಟ್ಟೆ ತಂಡಗಳೊಂದಿಗೆ ಕ್ಯಾಂಪ್ ಮರ್ಬೇಡದಿಂದ ರೆಂಗಾಘಾಟಿ ರೆಂಗಗೊಂಡಿ ಮತಗಟ್ಟೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸಾಮಾನ್ಯವಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಪೊಲೀಸರನ್ನು ಉಲ್ಲೇಖಿಸಿ ವರದಿ ಮಾಡಿದೆ.

ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನದೊಂದಿಗೆ 2023ರ ವಿಧಾನಸಭೆ ಚುನಾವಣೆಗೆ ಮಂಗಳವಾರ ಚಾಲನೆ ದೊರೆಯಲಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ನವೆಂಬರ್ 17 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಛತ್ತೀಸ್‌ಗಢದ 20 ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯಲಿದೆ. ಛತ್ತೀಸ್‌ಗಢವು 90 ಸದಸ್ಯರ ವಿಧಾನಸಭೆಯನ್ನು ಹೊಂದಿದೆ. ನಕ್ಸಲ್ ಪೀಡಿತ ಬೆಲ್ಟ್‌ಗಳಾದ ಬಸ್ತಾರ್, ದಾಂತೇವಾಡ, ಕಂಕೇರ್, ಕಬೀರಧಾಮ್ ಮತ್ತು ರಾಜನಂದಗಾಂವ್ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!