ಜಾರ್ಖಂಡ್​ ನಲ್ಲಿ ಐಇಡಿ ಸ್ಫೋಟ: ಕೋಬ್ರಾ ಪಡೆಯ ಇಬ್ಬರು ಯೋಧರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾರ್ಖಂಡ್​ ರಾಜ್ಯದ ಲೋಹರ್ದಗಾದಲ್ಲಿ ಐಇಡಿ ಸ್ಫೋಟ ಸಂಭವಿಸಿದ್ದು, ಕೋಬ್ರಾ ಪಡೆಯ ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಮಾವೋವಾದಿಗಳ ವಿರುದ್ಧ ಕೋಬ್ರಾ ವಿಶೇಷ ಕಾರ್ಯಾಚರಣೆ ಘಟಕ ಮತ್ತು ಜಾರ್ಖಂಡ್ ಪೊಲೀಸರುಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಬುಲ್‌ಬುಲ್ – ಪೆಶ್ರಾರ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ.
ಗಾಯಗೊಂಡವರನ್ನು ಚಿಕಿತ್ಸೆಗಾಗಿ ವಿಮಾನದಲ್ಲಿ ರಾಂಚಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಮಾಹಿತಿ ನೀಡಿದ್ದಾರೆ.
ಕೋಬ್ರಾ ಪಡೆಯು ಸಿಆರ್​​ಪಿಎಪ್​ನ ವಿಶೇಷ ಕಾರ್ಯಾಚರಣೆಯ ಘಟಕವಾಗಿದ್ದು, ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದರು.
ಕಳೆದ ಕೆಲವು ತಿಂಗಳುಗಳಿಂದ ಈ ಪ್ರದೇಶದಲ್ಲಿ ನಕ್ಸಲರ ಚಟುವಟಿಕೆಗಳು ಹೆಚ್ಚಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾಗಿ ನಕ್ಸಲರನ್ನು ಹಿಡಿಯಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!