ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಬುಧವಾರ ಭದ್ರತಾ ಪಡೆಗಳ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ನಡೆದ ಐಇಡಿ ಸ್ಫೋಟದಲ್ಲಿ ಕ್ಯಾಪ್ಟನ್ ಸೇರಿದಂತೆ ಕನಿಷ್ಠ ಆರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಮಿಲಿಟರಿಯ ಮಾಧ್ಯಮ ವಿಭಾಗವಾದ ಇಂಟರ್ ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ಐಎಸ್‌ಪಿಆರ್) ತಿಳಿಸಿದೆ.
ಈ ಘಟನೆ ಅಫ್ಘಾನಿಸ್ತಾನದ ಗಡಿಯಲ್ಲಿರುವ ಪ್ರಕ್ಷುಬ್ಧ ಕುರ್ರಂ ಬುಡಕಟ್ಟು ಜಿಲ್ಲೆಯ ಸುಲ್ತಾನಿ ಪ್ರದೇಶದಲ್ಲಿ ನಡೆದಿದೆ. ಈ ವೇಳೆ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಏಳು ಉಗ್ರರು ಹತ್ಯೆಯಾಗಿದ್ದಾರೆ.
ಭದ್ರತಾ ಪಡೆಗಳ ಕಾನ್ವಾಯ್ ಆ ಪ್ರದೇಶದ ಮೂಲಕ ಸಾಗುತ್ತಿದ್ದಾಗ ಉಗ್ರರು ತೀವ್ರ ಗುಂಡಿನ ದಾಳಿ ನಡೆಸಿದರು. ಈ ವೇಳೆ ಡೋಗರ್ ಸಮೀಪದಲ್ಲಿ ಐಇಡಿ (Improvised Explosive Device) ಸ್ಫೋಟಗೊಂಡು ಭಾರಿ ಪ್ರಮಾಣದ ಪ್ರಾಣಹಾನಿ ಸಂಭವಿಸಿದೆ.

                                    