ಜಮ್ಮುಕಾಶ್ಮೀರದ ಹೆದ್ದಾರಿಯಲ್ಲಿ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆ: ತಪ್ಪಿದ ದೊಡ್ಡ ಅನಾಹುತ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ಶನಿವಾರ ಭದ್ರತಾ ಪಡೆಗಳು ಭಾರೀ ಪ್ರಮಾಣದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಗಳನ್ನು ವಶಪಡಿಸಿಕೊಂಡಿದ್ದು, ದೊಡ್ಡ ದುರಂತವನ್ನು ತಪ್ಪಿಸಲಾಗಿದೆ.
ಸೋಪೋರ್‌ನ ಪುತ್ಕಾ ಪ್ರದೇಶದ ಸಂಗ್ರಾಮ ಹೆದ್ದಾರಿಯಲ್ಲಿ ಐಇಡಿ ಪತ್ತೆಯಾಗಿದೆ. ತಕ್ಷಣವೇ ಭದ್ರತಾ ಅಧಿಕಾರಿಗಳು ಹೈ ಅಲರ್ಟ್‌ ಘೋಷಿಸಿದರು. ಹೆದ್ದಾರಿಯಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
” ಸೇನೆಯ 5 ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಬಾರಾಮುಲ್ಲಾ ಜಿಲ್ಲೆಯ ಸಂಗ್ರಾಮದ ಪುಟ್ಖಾ ಪ್ರದೇಶದಲ್ಲಿ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಐಇಡಿಯನ್ನು ನಿಷ್ಕ್ರಿಯಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!