ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವೂ (AAP) ಅಧಿಕಾರ ಉಳಿಸಿಕೊಂಡಿರೆ ಮನೀಶ್ ಸಿಸೋಡಿಯಾ ಮತ್ತೆ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಜಂಗ್‌ಪುರ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ , ಸಿಸೋಡಿಯಾ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗುತ್ತಾರೆ ಮತ್ತು ಅವರೊಂದಿಗೆ ನೀವೆಲ್ಲರೂ ಉಪಮುಖ್ಯಮಂತ್ರಿಗಳಾಗುತ್ತೀರಿ. ಹೀಗಾಗಿ ನೀವು ಮನೀಶ್ ಸಿಸೋಡಿಯಾ ಅವರನ್ನು ಆಯ್ಕೆ ಮಾಡಬೇಕು ಎಂದು ಮತದಾರರಿಗೆ ಮನವಿ ಮಾಡಿದರು.
ಹಾಲಿ ಎಎಪಿ ಸರ್ಕಾರದ ಬಹುಪಾಲು ಅವಧಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಉಪನಾಯಕರಾಗಿ ಸೇವೆ ಸಲ್ಲಿಸಿದ ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 2023ರಲ್ಲಿ ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಯಿತು. ನಂತರ ಅವರು ರಾಜೀನಾಮೆ ನೀಡಿದರು. ಸಿಸೋಡಿಯಾ ಪ್ರಸುತ್ತ ಪತ್ಪರ್‌ಗಂಜ್‌ನಿಂದ ಶಾಸಕರಾಗಿದ್ದಾರೆ. ಆದರೆ ಈ ವಿಧಾನಸಭಾ ಚುನಾವಣೆಯಲ್ಲಿ ಜಂಗ್‌ಪುರದಿಂದ ಸ್ಪರ್ಧಿಸುತ್ತಿದ್ದಾರೆ ಎಂದರು.