ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ಕಾರ್ಯಕ್ರಮಕ್ಕೆ ಯಾವುದೇ ಕಾಂಗ್ರೆಸ್ ನಾಯಿ ಬಂದರೂ ಸಮಾಧಿ ಮಾಡುವುದಾಗಿ ಶಿವಸೇನೆ ನಾಯಕ ಸಂಜಯ್ ಗಾಯಕ್ವಾಡ್ ಬೆದರಿಕೆ ಹಾಕುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದು ರಾಜಕೀಯ ಸಂಚಲನ ಮೂಡಿಸಿತ್ತು. ಇದೀಗ ಕಾಂಗ್ರೆಸ್ ನಾಯಿ ಬಂದರೆ ಸಮಾಧಿ ಮಾಡುತ್ತೇನೆ ಎಂದು ಹೇಳಿರುವ ಮಾತು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಶಿವಸೇನೆಯ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಮ್ಮ ಜಿಲ್ಲೆಯ ಮಹಿಳೆಯರಿಗಾಗಿ ಸರ್ಕಾರದ ಪ್ರಮುಖ ‘ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್ ಯೋಜನೆ’ ಸಂಬಂಧ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ‘ನನ್ನ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ನ ಯಾವುದೇ ನಾಯಿ ಬರಲು ಯತ್ನಿಸಿದರೆ, ಅಲ್ಲಿಯೇ ಸಮಾಧಿ ಮಾಡುತ್ತೇನೆ’ ಎಂದು ಗಾಯಕ್‌ವಾಡ್ ಹೇಳಿದ್ದಾರೆ.