ಹೊಸದಿಗಂತ ವರದಿ ಮಡಿಕೇರಿ:
ಇಸ್ರೇಲ್ ಹಾಗೂ ಪ್ಯಾಲೆಸ್ತೈನ್ ದೇಶಗಳ ನಡುವೆ ಯುದ್ಧ ನಡೆಯುತ್ತಿದ್ದು, ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸುತ್ತಿವೆ.
ಇಸ್ರೇಲ್‌ನಲ್ಲಿ ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದ್ದು, ಕೊಡಗು ಜಿಲ್ಲೆಯವರು ಯಾರಾದರೂ ಇಸ್ರೇಲ್ ದೇಶದಲ್ಲಿ ಸಿಲುಕಿದ್ದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ: 08272-221077, 1077 08272-221099
ವಾಟ್ಸಾಪ್ ಸಂಖ್ಯೆ : 8550001077 ಅನ್ನು ಸಂಪರ್ಕಿಸಬಹುದಾಗಿದೆ.