ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಅಥವಾ ನರಕ ಇವೆರಡರಲ್ಲಿ ಯಾವುದು ಬೇಕು ಎಂದು ಕೇಳಿದರೆ, ನಾನು ನರಕವನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದು ಗೀತರಚನೆಕಾರ ಮತ್ತು ಚಿತ್ರಕಥೆಗಾರ ಜಾವೇದ್ ಅಖ್ತರ್ ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ , ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಕುರಿತು ಮಾತನಾಡುವ ಸಂದರ್ಭದಲ್ಲಿ ಅಖ್ತರ್ ಈ ಹೇಳಿಕೆ ನೀಡಿದ್ದಾರೆ. ನರಕಕ್ಕೆ ಹೋಗುವುದು ಅಥವಾ ನೆರೆಯ ದೇಶಕ್ಕೆ ಹೋಗುವ ಎರಡು ಆಯ್ಕೆ ನೀಡಿದರೆ, ನಾನು ನರಕವನ್ನೇ ಆಯ್ದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.