ಬಿಜೆಪಿ ಅಧಿಕಾರಕ್ಕೆ ಬಂದರೆ ಈದ್‌,ಮೊಹರಂ ಹಬ್ಬಕ್ಕೆ 2 ಸಿಲಿಂಡರ್‌ ಫ್ರೀ: ಅಮಿತ್ ಶಾ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಈದ್‌ ಮತ್ತು ಮೊಹರಂ ಹಬ್ಬದ ಸಂದರ್ಭ ಉಚಿತವಾಗಿ ಎರಡು ಗ್ಯಾಸ್ ಸಿಲಿಂಡರ್ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

ಮೆಂಧಾರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಬ್ದುಲ್ಲಾ, ಮುಫ್ತಿ ಮತ್ತು ನೆಹರು-ಗಾಂಧಿ ಕುಟುಂಬವು 90ರ ದಶಕದಿಂದಲೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಹರಡಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಯೋತ್ಪಾದನೆ ಕೊನೆಯಾಗಿದೆ. ಇಲ್ಲಿನ ಯುವಕರ ಕೈಗೆ ಕಲ್ಲುಗಳ ಬದಲಾಗಿ ಲ್ಯಾಪ್‌ಟಾಪ್‌ ನೀಡಲಾಗಿದೆ ಎಂದರು.

ಈ ಚುನಾವಣೆಯು ಜಮ್ಮು ಮತ್ತು ಕಾಶ್ಮೀರದಲ್ಲಿದ್ದ ಮೂರು ಕುಟುಂಬಗಳ ಆಡಳಿತವನ್ನು ಕೊನೆಗೊಳಿಸಲಿದೆ ಎಂದರು.

ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಇಲ್ಲಿ 35 ವರ್ಷ ಆಳಿತು. ಭಯೋತ್ಪಾದನೆ ಹೆಚ್ಚಾಯಿತು. 40 ಸಾವಿರ ಜನರು ಹತ್ಯೆಯಾದರು. ಮೂರು ಸಾವಿರ ದಿನ ಜಮ್ಮು ಮತ್ತು ಕಾಶ್ಮೀರ ಮುಚ್ಚಿತ್ತು. ಎಂಟು ವರ್ಷಗಳ ಕಾಲ ಕತ್ತಲೆಯಲ್ಲಿ ಮುಳುಗಿತ್ತು. ಇದಕ್ಕೆಲ್ಲ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಹೊಣೆಗಾರರು ಎಂದರು.

 

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!