ಬಿಜೆಪಿ ಅಧಿಕಾರಕ್ಕೆ ಬಂದರೆ ಸಿಂಗಟಾಲೂರು ಏತ ನೀರಾವರಿ ಪೂರ್ಣ: ಸಂಗಣ್ಣ

ಹೊಸದಿಗಂತ ವರದಿ,ಕೊಪ್ಪಳ:

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಸಂಸದ ಕರಡಿ ಸಂಗಣ್ಣ ಭರವಸೆ ನೀಡಿದರು.
ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಪರ ಕವಲೂರು ಗ್ರಾಮದಲ್ಲಿ ಶುಕ್ರವಾರ ಮತಪ್ರಚಾರ ನಡೆಸಿ ಮಾತನಾಡಿದ ಅವರು, ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣ ಗೊಳಿಸುವುದು ನನ್ನ ಕರ್ತವ್ಯ ಹಾಗೂ ಬದ್ಧತೆಯಾಗಿದೆ. ಕ್ಷೇತ್ರದ ರೈತರ ಜಮೀನಿಗೆ ನೀರು ತರಲಾಗುವುದು ಎಂದು ತಿಳಿಸಿದರು.
ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಭೂಮಿ ಬಿಟ್ಟು ಕೊಟ್ಟ ರೈತರಿಗೆ ದಶಕದಿಂದ ಪರಿಹಾರ ಸಿಕ್ಕಿರಲಿಲ್ಲ. ನಮ್ಮ ಸರ್ಕಾರವು ಭೂಸ್ವಾಧೀನಕ್ಕೆ ಪರಿಹಾರ ನೀಡುವ ಮೂಲಕ ನುಡಿದಂತೆ ನಡೆದಿದ್ದೇವೆ. ಇದು ನಮ್ಮ ಬದ್ಧತೆಯಾಗಿದೆ. ಯಾರೂ ಮಾಡದ ಕೆಲಸವನ್ನು ಡಬಲ್ ಇಂಜಿನ್ ಸರ್ಕಾರ ಮಾಡಿ ತೋರಿಸಿದೆ ಎಂದರು.
ಬಿಜೆಪಿ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇನೆ. ಬಿಜೆಪಿ ಮಹಿಳಾ ಅಭ್ಯರ್ಥಿ ಗೆ ಅವಕಾಶ ನೀಡುವ ಮೂಲಕ ಮಹಿಳಾ ಸಬಲೀಕರಣ ಮಾಡುತ್ತಿದೆ. ಕೊಪ್ಪಳ ಜನತೆ ತಮ್ಮ ಮನೆ ಮಗಳೆಂದು ಆಯ್ಕೆ ಮಾಡಿ ವಿಧಾನಸೌಧಕ್ಕೆ ಕಳುಹಿಸಿಕೊಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ನೂರಾರು ಕಾರ್ಯಕರ್ತರು ಭಾಗವಹಿಸಿ, ಬಿಜೆಪಿ ಬೆಂಬಲಿಸಿದರು. ಮಹಿಳಾ ಅಭ್ಯರ್ಥಿ ಘೋಷಿಸಿದ ಹಿನ್ನೆಲೆ ಬಿಜೆಪಿ ಬಗ್ಗೆ ಮಹಿಳೆಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಅಧ್ಯಕ್ಷರಾದ ಮಹಾಂತೇಶ್ ಪಾಟೀಲ್ ,ಗಾಣಿಗೇರ ಈರಣ್ಣ, ಬಸವರಾಜ ಈಶ್ವರಗೌಡ್ರು, ವೀರೇಶ ಸಜ್ಜನ, ಗಣೇಶ ಹೊರತಟ್ನಾಳ ಸೇರಿದಂತೆ ನೂರಾರು ಕಾರ್ಯಕರ್ತರು, ಗ್ರಾಮದ ಹಿರಿಯರು, ತಾಯಂದಿರು ಇದ್ದು ಬೆಂಬಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!