BJP ಗೆ ಧೈರ್ಯವಿದ್ದರೆ ಪಕ್ಷದ ಧ್ವಜದಿಂದ ಹಸಿರು ಬಣ್ಣ ತೆಗೆದುಹಾಕಲಿ: ಉದ್ಧವ್ ಠಾಕ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

BJP ಗೆ ಧೈರ್ಯವಿದ್ದರೆ ಪಕ್ಷದ ಧ್ವಜದಿಂದ ‘ಹಸಿರು ಬಣ್ಣ’ ತೆಗೆದುಹಾಕಲಿ ಎಂದು ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಕೇಸರಿ ಪಕ್ಷವು ಮುಸ್ಲಿಮರನ್ನು ಇಷ್ಟಪಡದಿದ್ದರೆ ತನ್ನ ಪಕ್ಷದ ಧ್ವಜದಿಂದ ಹಸಿರು ಬಣ್ಣವನ್ನು ತೆಗೆದುಹಾಕಬೇಕು ಎಂದು ವಾಗ್ದಾಳಿ ನಡೆಸಿದರು.

ವಕ್ಫ್ ತಿದ್ದುಪಡಿ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ತೋರಿದ ಕಾಳಜಿ ಪಾಕಿಸ್ತಾನದ ಸಂಸ್ಥಾಪಕ ಮಹಮ್ಮದ್ ಅಲಿ ಜಿನ್ನಾ ಅವರನ್ನು ನಾಚಿಕೆಪಡಿಸುವಂತಿತ್ತು ಎಂದು ಟೀಕಿಸಿದರು.

ಕೇಂದ್ರದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರದಲ್ಲಿದ್ದು, ಕೆಲಸ ಕಾರ್ಯಗಳು ಸಾಂಗವಾಗಿ ನಡೆಯುತ್ತಿದ್ದರೂ ಅದು ಹಿಂದು-ಮುಸ್ಲಿಂ ಸಮಸ್ಯೆಗಳನ್ನು ಎತ್ತಿ ಹಿಡಿಯುತ್ತಿದೆ ಎಂದು ಆರೋಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!