ಹೊಸದಿಗಂತ ಡಿಜಿಟಲ್ ಡೆಸ್ಕ್
ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡುವಂತೆ ಚಿತ್ರದ ನಿರ್ದೇಶಕರಿಗೆ ಹೇಳಿ, ಆಗ ಎಲ್ಲರೂ ಅದನ್ನು ಉಚಿತವಾಗಿ ವೀಕ್ಷಿಸಬಹುದು ಎಂದು ಹೇಳುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಿಜೆಪಿ ನಾಯಕರಿಗೆ ವ್ಯಂಗ್ಯವಾಗಿ ತಿರುಗೇಟಿ ನೀಡಿದ್ದಾರೆ.
ಗುರುವಾರ ನಡೆದ ದೆಹಲಿ ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸುವಂತೆ ಬಿಜೆಪಿ ನಾಯಕರು ಬೇಡಿಕೆ ಇಟ್ಟಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಚಿತ್ರವನ್ನು ಎಲ್ಲರೂ ಉಚಿವಾಗಿ ನೋಡಬೇಕು ಎಂದು ನೀವು ಬಯಸುವುದಾದರೆ ಯೂಟ್ಯೂಬ್‌ನಲ್ಲಿ ಹಾಕಲು ವಿವೇಕ್ ಅಗ್ನಿಹೋತ್ರಿಯವರಿಗೆ ಹೇಳಿ. ಆಗ ತೆರಿಗೆ ಮುಕ್ತಗೊಳಿಸುವ ಪ್ರಶ್ನೆಯೂ ಉದ್ಭವಿಸುವುದಿಲ್ಲ. ಆ ಚಿತ್ರವನ್ನು ಒಂದೇ ದಿನದಲ್ಲಿ ಎಲ್ಲರೂ ನೋಡಿಬಿಡಬಹುದು. ಕೆಲವರು ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೋಟಿಗಟ್ಟಲೆ ಹಣ ಸಂಪಾದಿಸಿದ್ದಾರೆ. ಆದರೆ ಬಿಜೆಪಿಯವರಿಗೆ ಕೇವಲ ಪೋಸ್ಟರ್‌ಗಳನ್ನು ಅಂಟಿಸುವ ಕೆಲಸ ನೀಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ಉತ್ತರಾಖಂಡ, ಚಂಡೀಗಢ, ಗೋವಾ, ಹಿಮಾಚಲ ಪ್ರದೇಶದ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಶ್ಮೀರಿ ಫೈಲ್ಸ್ ಚಿತ್ರಕ್ಕೆ ತೆರಿಗೆ ವಿನಾಯ್ತಿ ಘೋಷಿಸಲಾಗಿದೆ.