ಅಧಿಕಾರಕ್ಕೆ ಬಂದರೆ ​ಕೆಜಿಯಿಂದ ಪಿಜಿಯವರೆಗೂ ಉಚಿತ ಶಿಕ್ಷಣ: ದೆಹಲಿ ಜನತೆಗೆ ಬಿಜೆಪಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ)ಯು ಎರಡನೇ ಭಾಗವನ್ನು ಬಿಡುಗಡೆ ಮಾಡಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ​ಕೆಜಿಯಿಂದ ಪಿಜಿಯವರೆಗೂ ಉಚಿತ ಶಿಕ್ಷಣ ನೀಡುವುದಾಗಿ ಭರವಸೆ ನೀಡಿದರು.

ಮಂಗಳವಾರ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಪಕ್ಷದ ನಿರ್ಣಯ ಪತ್ರದ ಎರಡನೇ ಭಾಗವನ್ನು ಬಿಡುಗಡೆ ಮಾಡಿದರು. ಆರೋಗ್ಯ ಮತ್ತು ಟ್ರಾಫಿಕ್ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು.

ಸರ್ಕಾರಿ ಸಂಸ್ಥೆಗಳಲ್ಲಿ ಶಿಶುವಿಹಾರದಿಂದ ಸ್ನಾತಕೋತ್ತರ ಹಂತದವರೆಗೆ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಸೇರಿದಂತೆ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಘೋಷಿಸಿದರು. ಪ್ರಣಾಳಿಕೆಯು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಮತ್ತು ರಾಜ್ಯ ಪಿಸಿಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ಪ್ರೋತ್ಸಾಹವನ್ನು ನೀಡುತ್ತದೆ ಮತ್ತು ಎರಡು ಪ್ರಯತ್ನಗಳಿಗೆ ರೂ 15,000 ನೀಡಲಾಗುವುದು ಎಂದರು.

ಭೀಮರಾವ್ ಅಂಬೇಡ್ಕರ್ ಸ್ಟೈಪೆಂಡ್ ಯೋಜನೆಯಡಿಯಲ್ಲಿ ಐಟಿಐ ಮತ್ತು ಪಾಲಿಟೆಕ್ನಿಕ್ ಸ್ಕಿಲ್ ಸೆಂಟರ್‌ಗಳಲ್ಲಿ ತಾಂತ್ರಿಕ ಕೋರ್ಸ್‌ಗಳನ್ನು ಕಲಿಯುತ್ತಿರುವ ಪರಿಶಿಷ್ಟ ಜಾತಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ 1,000 ಸ್ಟೈಫಂಡ್ ಅನ್ನು ಪಕ್ಷವು ಘೋಷಿಸಿತು.

ಆಟೋ ಟ್ಯಾಕ್ಸಿ ಚಾಲಕ ಕಲ್ಯಾಣ ಮಂಡಳಿ ರಚಿಸುವುದಾಗಿಯೂ ಬಿಜೆಪಿ ಭರವಸೆ ನೀಡಿದ್ದು, ಚಾಲಕರಿಗೆ 10 ಲಕ್ಷ ಜೀವ ವಿಮೆ, 5 ಲಕ್ಷ ಅಪಘಾತ ವಿಮೆ ನೀಡುವುದಾಗಿ ಭರವಸೆ ನೀಡಿದೆ.

ಮನೆಕೆಲಸಗಾರರಿಗೆ ಕಲ್ಯಾಣ ಮಂಡಳಿಯನ್ನು ರಚಿಸುವುದಾಗಿ ಭರವಸೆ ನೀಡಿದೆ, ಅದೇ ರೀತಿಯ ವಿಮಾ ಪ್ರಯೋಜನಗಳನ್ನು ನೀಡುತ್ತದೆ.

ಕೇಂದ್ರದಲ್ಲಿ ಮೋದಿ ಸರ್ಕಾರವಿದೆ ದೆಹಲಿಯಲ್ಲೂ ಮೋದಿ ಸರ್ಕಾರ ಬರಲಿದೆ, ಉತ್ತಮ ದೆಹಲಿ ಮಾಡುತ್ತೇವೆ. ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ ಮತ್ತು ನಾವು ಅಧಿಕಾರಕ್ಕೆ ಬಂದರೆ ಹಗರಣಗಳ ತನಿಖೆಗೆ ಎಸ್‌ಐಟಿ ರಚಿಸುತ್ತೇವೆ ಎಂದು ಅನುರಾಗ್ ಠಾಕೂರ್ ಭರವಸೆ ನೀಡಿದರು. ಯಾವತ್ತೂ ನಷ್ಟದಲ್ಲಿ ಇರದ ದೆಹಲಿ ಮೊದಲ ಬಾರಿಗೆ ಆದಾಯ ನಷ್ಟಕ್ಕೆ ಸಿಲುಕಲಿದ್ದು, ಆಮ್ ಆದ್ಮಿ ಪಕ್ಷ, ಅರವಿಂದ್ ಕೇಜ್ರಿವಾಲ್ ಮತ್ತು ಅತಿಶಿ ಅವರ ಕಾರಣದಿಂದ ಇದು ಸಂಭವಿಸುತ್ತದೆ ಎಂದು ಅವರು ಹೇಳಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!