ಗುಜರಾತ್‌ ನಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಹಳ್ಳಿಯಲ್ಲಿ ಶಾಲೆ, ಮೂಲೆ ಮೂಲೆಗೂ ನೀರು: ಕೇಜ್ರಿವಾಲ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್‌ ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಹಳ್ಳಿಯಲ್ಲಿ ಸರ್ಕಾರಿ ಶಾಲೆಗಳನ್ನು ನಿರ್ಮಿಸುತ್ತದೆ. ಕಚ್ ಜಿಲ್ಲೆಯ ಮೂಲೆ ಮೂಲೆಗೆ ನರ್ಮದಾ ನೀರನ್ನು ಪಡೆಯುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಕೇಜ್ರಿವಾಲ್ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿದ್ದಾರೆ.
ದೆಹಲಿಯಲ್ಲಿ ಬಡ ಕುಟುಂಬಗಳಿಗೆ ಸೇರಿದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯುತ್ತಿದ್ದಾರೆ. ಉತ್ತಮ ಸಂಬಳದ ಉದ್ಯೋಗಗಳನ್ನು ಪಡೆದ ನಂತರ ಅವರು ತಮ್ಮ ಕುಟುಂಬವನ್ನು ಬಡತನದಿಂದ ಮೇಲೆತ್ತುತ್ತಾರೆ. ಆದರೆ ಗುಜರಾತ್‌ನಲ್ಲಿ ಆಡಳಿತಾರೂಢ ಬಿಜೆಪಿಯು ಕಚ್‌ನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಎಎಪಿ ಅಧಿಕಾರಕ್ಕೆ ಬಂದ ನಂತರ ಗುಜರಾತ್‌ನ ಪ್ರತಿಯೊಂದು ಹಳ್ಳಿಗಳಲ್ಲಿ ಸರ್ಕಾರಿ ಶಾಲೆಗಳನ್ನು ನಿರ್ಮಿಸಲಾಗುತ್ತದೆಕಚ್ ಪ್ರದೇಶದ ಮೂಲೆ ಮೂಲೆಗೂ ನರ್ಮದಾ ನೀರನ್ನು ತರುತ್ತೇವೆ. ನಿಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಎಎಪಿಗೆ ಒಂದು ಅವಕಾಶ ನೀಡಿ ಎಂದು ಮನವಿ ಮಾಡಿಕೊಂಡರು.
ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ, ಜನರಿಗೆ ಉಚಿತ ಮತ್ತು ಗುಣಮಟ್ಟದ ಚಿಕಿತ್ಸೆಯನ್ನು ಒದಗಿಸಲು ಗುಜರಾತ್‌ನ 33 ಜಿಲ್ಲೆಗಳಲ್ಲಿ ಪ್ರತಿಯೊಂದಕ್ಕೂ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸುವುದಾಗಿ ಕೇಜ್ರಿವಾಲ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!