ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಉದ್ಯೋಗ ಭರ್ತಿ: ರಾಹುಲ್ ಗಾಂಧಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಉದ್ಯೋಗ ಭರ್ತಿ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.

ಮಧ್ಯಪ್ರದೇಶದ ಮಂಡ್ಲಾದಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ 30 ಲಕ್ಷ ಉದ್ಯೋಗಗಳು ಖಾಲಿಯಿದೆ, ಆದರೆ ಕೇಂದ್ರ ಸರ್ಕಾರ ಈ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ.ನಾವು ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ 30 ಲಕ್ಷ ಉದ್ಯೋಗ ಭರ್ತಿ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

ಭಾರತದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ತುಂಬಿಲ್ಲ.. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು ಮಾಡುವ ಮೊದಲ ಕೆಲಸವೆಂದರೆ 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವುದಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!