ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಡ ಕುಟುಂಬದ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ ಉಚಿತ : ಕಾಂಗ್ರೆಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು ಉಚಿತವಾಗಿ 10 ಕೆಜಿ ಅಕ್ಕಿ ನೀಡುತ್ತೇವೆ, ಇದು ಮೂರನೇ ಗ್ಯಾರಂಟಿ ಎಂದು ಕಾಂಗ್ರೆಸ್‌ ಹೇಳಿದೆ.

ನಗರದಲ್ಲಿ ಶುಕ್ರವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಡಿಕೆಶಿ, ಈ ತುರ್ತು ಪತ್ರಿಕಾಗೋಷ್ಠಿಯ ಕಾರಣ ಏನೆಂದರೆ ಅನ್ನ ಭಾಗ್ಯದ ಅಕ್ಕಿ 7 ಕೆ.ಜಿಯಿಂದ 5 ಕೆ.ಜಿಗೆ ಇಳಿಸಿದ್ದಾರೆ. ಆದ್ದರಿಂದ ಮೂರನೇ ಗ್ಯಾರಂಟಿ ಪ್ರಕಟಿಸುತ್ತಿದ್ದೇವೆ. ಜನರ ಹಸಿವು ನೀಗಿಸಲು ಅನ್ನಭಾಗ್ಯ ಅಕ್ಕಿ (Rice)ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ಕೊಡಲು ಕಾಂಗ್ರೆಸ್ ಮೂರನೇ ಗ್ಯಾರಂಟಿ ನೀಡಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!