ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಉಚಿತ ವಿದ್ಯುತ್, ಯುವಕರಿಗೆ ನಿರುದ್ಯೋಗ ಭತ್ಯೆ : ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ನಾವು ಅಧಿಕಾರಕ್ಕೆ ಬಂದ್ರೆ ಜನರಿಗೆ ಉಚಿತ ವಿದ್ಯುತ್, ಯುವಕರಿಗೆ ನಿರುದ್ಯೋಗ ಭತ್ಯೆ ನೀಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ , ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್, ಯುವಕರಿಗೆ ನಿರುದ್ಯೋಗ ಭತ್ಯೆ, ಉಚಿತ ಅಕ್ಕಿ ನೀಡುತ್ತೇವೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ ಎಂದು ಹೇಳಿದರು.

ಕೋಲಾರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಮತ್ತೆ ಹೈಕಮಾಂಡ್ ಹೇಳಿದ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಹೈಕಮಾಂಡ್ ಎಲ್ಲಿ ಹೇಳುತ್ತೋ ಆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ಇಂದು ಮತ್ತೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.ನಾವು ಅಧಿಕಾರಕ್ಕೆ ಬಂದರೆ ಉಚಿತ ಅಕ್ಕಿ, ಉಚಿತ ವಿದ್ಯುತ್, ಯುವಕರಿಗೆ ನಿರುದ್ಯೋಗ ಭತ್ಯೆ ನೀಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!