ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದೇಶಾದ್ಯಂತ ರೈತರ ಸಾಲ ಮನ್ನಾ: ಸಿಎಂ ಸಿದ್ದು ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿಯ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಗೆ 400 ಸ್ಥಾನ ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದು ಬಿಜೆಪಿ ಮತ್ತು ಆರ್ ಎಸ್ ಎಸ್ ಹೇಳಿವೆ. ಅಂಬೇಡ್ಕರ್ ಅವರ ಸಂವಿಧಾನವು ಸಮಾನ ಅವಕಾಶಗಳನ್ನು ಖಾತ್ರಿಪಡಿಸುತ್ತದೆ ಮತ್ತು ಎಲ್ಲರಿಗೂ ಸಮಾನ ಸಮಾಜವನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ 25 ಖಾತರಿಗಳಿಗೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಯವರು ಸಹಿ ಮಾಡಿ ಹಂಚಿದ್ದಾರೆ. ಬಡ ಕುಟುಂಬದ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ನೀಡುವ ಮಹಾಲಕ್ಷ್ಮಿ ಯೋಜನೆ, ಯುವನ್ಯಾಯದಡಿ ವರ್ಷಕ್ಕೆ 1 ಲಕ್ಷ ರೂ. ನೀಡುವ ಯೋಜನೆ, ರೈತರ ಬೆಳೆಗೆ ನ್ಯಾಯಯುತ ಬೆಲೆ, ಸಾಲ ಮನ್ನಾ, ಸ್ವಾಮಿನಾಥನ್ ವರದಿ ಜಾರಿ ಬೇಡಿಕೆಗಳನ್ನು ಈಡೇರಿಸುವ ‘ರೈತ ನ್ಯಾಯ’ ಯೋಜನೆಗಳ ಭರವಸೆ ನೀಡಿದ್ದೇವೆ. ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರ ಸಾಲ ಮನ್ನಾ ಮಾಡುವುದಾಗಿ ತಿಳಿಸಿದರು.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!