ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಂ ಭಯೋತ್ಪಾದಕರಿಗೆ ಒಂದು ರೀತಿ ಹಬ್ಬ. ಈ ಹಿಂದೆ ಹಲವು ಬಂಡಾಯ ಪ್ರಕರಣಗಳನ್ನು ಕೈಬಿಟ್ಟು ಮತ್ತೆ ಅಧಿಕಾರಕ್ಕೆ ಬಂದರು. ಈಗಂತೂ ಹುಬ್ಬಳ್ಳಿ ಗಲಭೆ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಸಿದ್ದರಾಮಯ್ಯ ಗೋಮುಖ ವ್ಯಾಘ್ರ, ಇಂತಹ ಬೆಳವಣಿಗೆಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಡುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಆರ್. ಅಶೋಕ್, ಸರ್ಕಾರದ ಈ ನಡೆ ಪೊಲೀಸರ ಸ್ಥೈರ್ಯ ಕುಂದಿಸುವ ಕೆಲಸ. ಪೊಲೀಸರಿಗೇ ಈಗ ಅನಿಸಿಬಿಟ್ಟಿದೆ, ಈ ಸಮುದಾಯದವರ ಮೇಲೆ ದೂರು ದಾಖಲಿಸಬಾರದು ಅಂತ. ಸರ್ಕಾರ ಮತಾಂಧ ಶಕ್ತಿಗಳಿಗೆ ಪ್ರಚೋದನೆ ಕೊಡ್ತಿದೆ. ಇದರ ಬಗ್ಗೆ ಬಿಜೆಪಿಯಿಂದ ಹೋರಾಟ ನಡೆಸುವ ಬಗ್ಗೆ ಚರ್ಚೆ ಮಾಡ್ತೇವೆ. ಸಿದ್ದರಾಮಯ್ಯ ಗೋಮುಖ ವ್ಯಾಘ್ರ, ಈ ಥರಹದ ಬೆಳವಣಿಗೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ ಆಗಲಿದೆ ಎಂದು ಲೇವಡಿ ಮಾಡಿದ್ದಾರೆ.