ನಾನಾಗಿದ್ದರೆ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದೆ : ಅಭಿನವ ಸಂಗನಬಸವ ಸ್ವಾಮೀಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಬಸವನಬಾಗೇವಾಡಿ  ತಾಲೂಕಿನ ಮನಗೂಳಿಯ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ.

ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಯುವಕ ಸಂಘ ಹಾಗೂ ಕೊಲ್ಹಾರ ತಾಲೂಕು ಪಂಚಮಸಾಲಿ ಸಮಾಜವತಿಯಿಂದ ನಡೆದ ಕಿತ್ತೂರ ರಾಣಿ ಚನ್ನಮ್ಮನ 246ನೇ ಜಯಂತ್ಯೋತ್ಸವ ಹಾಗೂ 200ನೇ ವಿಜಯೋತ್ಸವ ಸಮಾರಂಭ ನಡೆಯಿತು.

ಸಮಾರಂಭದಲ್ಲಿ ಅಭಿನವ ಸಂಗನಬಸವ ಸ್ವಾಮೀಜಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಬಸವ ಜಯಮೃತ್ಯುಂಜಯ ಶ್ರೀಗಳ ಹೆಗಲ ಮೇಲೆ ಸಿದ್ದರಾಮಯ್ಯ ಹಾಕಿದ್ದರು. ನಾನಾಗಿದ್ದರೆ ಸಿಎಂ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದೆ. ಆದರೆ, ಬಸವ ಜಯಮೃತ್ಯುಂಜಯ ಶ್ರೀಗಳು ಸುಮ್ಮನೆ ಇದ್ದರು ಎಂದು ಸಿಎಂ ಅವರನ್ನು ಅಭಿನವ ಸಂಗನಬಸವಶ್ರೀಗಳು ಏಕವಚನದಲ್ಲಿ ನಿಂದಿಸಿದ್ದಾರೆ.

ಸ್ವಾಮೀಜಿ‌‌ ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ‌ ಜಾಲತಾಣಗಳಲ್ಲಿ ಸ್ವಾಮೀಜಿ ಅವರಿಗೆ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಜನರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ. ಮಾತಿನ‌ ಭರದದಲ್ಲಿ‌ ಸಿಎಂ ವಿರುದ್ಧ ಮಾತನಾಡಿದೆ. ಅವರ ಸ್ಥಾನಮಾನಕ್ಕೆ ಅವಮಾನ ಮಾಡಿದೆ. ಅದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದೇನೆಂದು ಎಂದು ಹೇಳಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!