Friday, July 1, 2022

Latest Posts

ನನಗೆ ಕೊರೋನಾ ಸೋಂಕು ತಗುಲಿದೆ.. ನಾನು ಸತ್ತರೆ ಅದಕ್ಕೆ ಸರ್ಕಾರವೇ ನೇರ ಹೊಣೆ.. ಇದೇ ನನ್ನ ಡೆತ್ ನೋಟ್!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕರ್ನಾಟಕದಲ್ಲಿಯೂ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಇದೀಗ ‘ಮಠ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ಗೂ ಕೊರೋನಾ ದೃಢ ಪಟ್ಟಿದೆ.

ಈ ಕುರಿತು ಫೇಸ್ ಬುಕ್ ಲೈವ್ ಬಂದ ಗುರುಪ್ರಸಾದ್ “ತಮಗೆ ಕೊರೋನಾ ಬರಲು ಸರ್ಕಾರ ಹಾಗೂ ರಾಜಕಾರಣಿಗಳೇ ಕಾರಣ ಎಂದು ಗುಡುಗಿದ್ದಾರೆ.

ಮುಖ್ಯಮಂತ್ರಿ ಬಿಎ.ಎಸ್. ಯಡಿಯೂರಪ್ಪ, ವಿಜಯೇಂದ್ರ ಮತ್ತು ಸಚಿವ ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಮಾಣಿಕತೆ ಇದ್ದಲ್ಲಿ ಆಡಳಿತ ಇರುತ್ತದೆ. ಪ್ರಾಮಾಣಿಕತೆ ಇಲ್ಲದ ಕಡೆ ರಾಜಕೀಯ ಇರುತ್ತದೆ. ರಾಜಕಾರಣಿಗಳು ಯಾರೂ ಕೂಡ ಸಾಚಾ ಅಲ್ಲ. ರಾಜಕೀಯ ಮಾಡುವುದನ್ನು ಬಿಟ್ಟು ಜನರ ಸೇವೆ ಮಾಡಿ ಎಂದು ಹೇಳಿದ್ದಾರೆ.

ನನ್ನ ಕೊನೆಯ ಕ್ಷಣಗಳ ಕೊನೆಯ ಮಾತುಗಳು… ಕೊರೋನಾ ಪಾಸಿಟಿವ್ ಬಂದಿದೆ. ನನ್ನ ಮನೆಯವರೆಗೂ ಕೊರೋನಾ ವೈರಸ್‌ಅನ್ನು ತಂದುಕೊಟ್ಟ ಯಡಿಯೂರಪ್ಪ, ವಿಜಯೇಂದ್ರ ಇವರುಗಳಿಗೆಲ್ಲ ಧನ್ಯವಾದಗಳು.

ನಾನು ಆಕಸ್ಮಿಕವಾಗಿ ಮೃತಪಟ್ಟರೆ ಸರ್ಕಾರವೇ ನೇರ ಕಾರಣ. ಇದೇ ನನ್ನ ಡೆತ್ ನೋಟ್. ಜನರ ಪ್ರಾಣ ಉಳಿಸಿ ಸ್ವಾಮಿ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss