January19, 2026
Monday, January 19, 2026
spot_img

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ : ಬಾನು ಮುಷ್ತಾಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಸಕ್ತ ಸಾಲಿನ ದಸರಾ ಉತ್ಸವವನ್ನು ಉದ್ಘಾಟಿಸಲು ರಾಜ್ಯ ಸರ್ಕಾರ ತಮ್ಮನ್ನು ಆಹ್ವಾನಿಸಿದ್ದನ್ನು ವಿರೋಧ ಪಕ್ಷಗಳು ಟೀಕಿಸುತ್ತಿರುವುದಕ್ಕೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷಾಂತರ ಜನರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಹೀಗಾಗಿ ಕೆಲವರ ವಿರೋಧ ಹಾಗೂ ಪ್ರತಿಕ್ರಿಯೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಬೂಕರ್‌ ಪ್ರಶಸ್ತಿಯ ಮಹತ್ವ ಕೆಲವರಿಗೆ ತಿಳಿದಿಲ್ಲ. ಅದು ತಿಳಿದಿದ್ದರೆ ಈ ರೀತಿ ಟೀಕೆ ಮಾಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಆಕ್ಷೇಪ ವ್ಯಕ್ತಪಡಿಸಿರುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ ಅವರು, ಯಾವ ವಿಷಯವನ್ನು ರಾಜಕೀಯ ರಾಜಕೀಯಗೊಳಿಸಬೇಕು. ರಾಜಕೀಯಗೊಳಿಸಬಾರದು ಎಂಬುದನ್ನು ತಿಳಿದುಕೊಳ್ಳಬೇಕೆಂದು ಹೇಳಿದ್ದಾರೆ. ರಾಜಕಾರಣಿಗಳ ಒಂದು ಭಾಗವನ್ನು ತರಾಟೆಗೆ ತೆಗೆದುಕೊಂಡ ಅವರು, ಯಾವ ವಿಷಯವನ್ನು ರಾಜಕೀಯಗೊಳಿಸಬೇಕೆಂದು ಅವರು ತಿಳಿದುಕೊಳ್ಳಬೇಕು ಎಂದು ಹೇಳಿದರು.

Must Read

error: Content is protected !!