I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದರೆ ಒಂದೊಂದು ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ: ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿಯಾಗುತ್ತಿದೆ. ಆದರೆ, ಬಿಜೆಪಿ ಸರ್ಕಾರವನ್ನು ಹಾಳು ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದೀಗ I.N.D.I.A ಅಲೆಯನ್ಸ್‌ನವರು ಹೊಸ ಸೂತ್ರದ ಪ್ರಕಾರ ರಾಜಕೀಯ ಮಾಡುತ್ತಿದೆ.

I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದಾಗ ಪ್ರತಿ ವರ್ಷ ಒಬ್ಬ ವ್ಯಕ್ತಿ ಪ್ರಧಾನಿಯಾಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದರು.

ಮೊದಲ ವರ್ಷ, ಎರಡನೇ ವರ್ಷದಲ್ಲಿ ಒಬ್ಬರು, ಮೂರನೇ ವರ್ಷ, ನಾಲ್ಕನೇ ವರ್ಷ, ಐದನೇ ವರ್ಷದಲ್ಲಿ ಒಬ್ಬರು ಪ್ರಧಾನಿಯಾಗುತ್ತಾರೆ ಎಂದು ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

5 ವರ್ಷ ಈ ರೀತಿ ಯಾರಿಗಾದರೂ ದೇಶವನ್ನು ನೀಡುವ ಬಗ್ಗೆ ಯೋಚಿಸುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!