Sunday, August 31, 2025

ʼಸತ್ಯ ಹೇಳಿದ್ರೆ ಎಲ್ಲರಿಗೂ ಸಹಿಸೋಕೆ ಆಗೋದಿಲ್ಲ, ಇರಲಿ ಬಿಡಿ ನಾನು ಸೈಲೆಂಟ್‌ ಆಗ್ಬಿಡ್ತೀನಿʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ನಾನು ಸದನದಲ್ಲಿ ಸೇರಿದಂತೆ ಎಲ್ಲಿ ಏನೇ ಮಾತನಾಡಿದರೂ ಅದರಲ್ಲಿ ಕೇವಲ ತಪ್ಪು ಕಂಡು ಹಿಡಿಯುವುದೇ ಬೇರೆಯವರ ಕೆಲಸವಾಗಿದೆ. ರಾಜಕೀಯದವರು, ಪ್ರಮೋದಾ ದೇವಿ ಅವರು, ಸಂಸದ ಯದುವೀರ್ ಅವರು, ವಿಧಾನಸಭೆಯಲ್ಲಿ ಹೀಗೆ ಎಲ್ಲರೂ ತಪ್ಪು ಹುಡುಕುವವರೇ. ಹೀಗಾಗಿ ನಾನು ಮಾತನಾಡದಿರುವುದೇ ಲೇಸು ಅನಿಸುತ್ತದೆ. ಈ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲು ಬೇರೆ ನಾಯಕರು ಹಾಗೂ ಪಕ್ಷದ ವಕ್ತಾರರಿದ್ದಾರೆ. ಅವರ ಬಳಿ ಮಾತನಾಡಿ ಎಂದು ಹೇಳಿದರು.

ಇದನ್ನೂ ಓದಿ